ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.
ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ
ಈ ಹಿನ್ನೆಲೆ ಸುದೀಪ್ ತಾಯಿ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್ಕುಮಾರ್ ಕುಟುಂಬ ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸುದೀಪ್ ತಾಯಿ ಸರೋಜಾ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್ಕುಮಾರ್ ಜೊತೆ ಪುತ್ರರಾದ ಯುವ, ವಿನಯ್ ಕೂಡ ಭೇಟಿ ಕೊಟ್ಟಿದ್ದಾರೆ. ಬಳಿಕ ‘ವಿಕ್ರಾಂತ್ ರೋಣ’ ಡೈರೆಕ್ಟರ್ ಅನೂಪ್ ಭಂಡಾರಿ ಕೂಡ ಆಗಮಿಸಿದ್ದಾರೆ.