ಬೆಂಗಳೂರು: ನಟ ಕಿಚ್ಚ ಸುದೀಪ್ ಸುದೀಪ್ ತಾಯಿ ವಿಧಿವಶವಾದ ಹಿನ್ನೆಲೆಯಲ್ಲಿ ತಾಯಿಯ ಅಂತಿಮ ದರ್ಶನ ಪಡೆಯಲು ಶಿವರಾಜ್ಕುಮಾರ್ ದಂಪತಿ ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸುದೀಪ್ ತಾಯಿಯ ಅಂತಿಮ ದರ್ಶನ ಪಡೆದ ಬಳಿಕ ದುಃಖದಲ್ಲಿರುವ ಸುದೀಪ್ರನ್ನು ಶಿವಣ್ಣ ಸಂತೈಸಿದ್ದಾರೆ. ಈ ವೇಳೆ, ಹಿರಿಯ ನಟಿ ತಾರಾ, ನಟ ಡಾಲಿ, ತರುಣ್ ಸುದೀರ್,
ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರುತ್ತಿದೆಯೇ..? ಹಾಗಾದ್ರೆ ಈ ಕಾಯಿಲೆಗಳ ಸೂಚನೆ ಇರಬಹುದು.!
ಅಭಿಮನ್ಯು ಕಾಶಿನಾಥ್, ಇಂದ್ರಜೀತ್ ಲಂಕೇಶ್, ರಕ್ಷಿತಾ ಪ್ರೇಮ್ ದಂಪತಿ ಸೇರಿದಂತೆ ಅನೇಕರು ನಟನ ಮನೆಗೆ ಆಗಮಿಸಿದ್ದಾರೆ. ಸುದೀಪ್ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.