ಬೆಂಗಳೂರು:- ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ, ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅಧಿಕಾರ, ಚುನಾವಣೆ ದೃಷ್ಟಿಯಿಂದ ನಾನಿಲ್ಲ. ಮುಖಂಡರು ನನ್ನನ್ನು ಅರ್ಥ ಮಾಡಿಕೊಳ್ಳುತ್ತಾರೆ. ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ, ಪಕ್ಷ ನನಗೆ ಅನಿವಾರ್ಯ ಎಂದರು.
ಶನಿವಾರ ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆದಿದ್ದು, ಸುದೀರ್ಘವಾಗಿ ಚರ್ಚೆ ಆಗಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧ ಎಂದಿದ್ದಾರೆ. ನನ್ನ ಮೇಲೂ ಒತ್ತಡ ಇದೆ, ನಾನು ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೆನೆ. ಪಕ್ಷದ ಶಿಸ್ತಿನ ಸಿಪಾಯಿ ನಾನು, ನನ್ನ ಆಚಾರ ವಿಚಾರಗಳನ್ನ ಮುಖಂಡರ ಗಮನಕ್ಕೆ ತರುತ್ತೇನೆ. ಅಧಿಕಾರ, ಚುನಾವಣೆ ದೃಷ್ಟಿಯಿಂದ ನಾನಿಲ್ಲ. ಮುಖಂಡರು ನನ್ನನ್ನು ಅರ್ಥ ಮಾಡಿಕೊಳ್ಳುತ್ತಾರೆ. ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ, ಪಕ್ಷ ನನಗೆ ಅನಿವಾರ್ಯ ಎಂದು ಹೇಳಿದರು.
ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಗೌರವಕ್ಕೆ ನಾನು ಸದಾ ಋಣಿಯಾಗಿದ್ದೇನೆ. ನಾನು ಕೂಡ ಕಾರ್ಯಕರ್ತರಿಗೆ ಭರವಸೆ ನೀಡಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದಿದ್ದೇನೆ. ಒಂದು ವೇಳೆ ಪಕ್ಷ ನನ್ನನ್ನ ಆಯ್ಕೆ ಮಾಡಿದರೆ ನಾನು ನನ್ನ ಅಭಿಪ್ರಾಯ ತಿಳಿಸುತ್ತೇನೆ. ನಮ್ಮ ಮುಖಂಡರ ಕಾರ್ಯಕರ್ತರು ಚುನಾವಣೆಗೆ ಸಿದ್ಧವಾಗಿದ್ದಾರೆ. ಬಿಜೆಪಿ ಎರಡು ಅಭ್ಯರ್ಥಿ ಘೋಷಣೆ ಮಾಡಿ, ಒಂದು ಜೆಡಿಎಸ್ಗೆ ಬಿಟ್ಟಿದ್ದಾರೆ ಎಂಬುದು ಸ್ಪಷ್ಟವಾಗಿದೆ. 3ನೇ ಅಭ್ಯರ್ಥಿ ಜೆಡಿಎಸ್ಗೆ ಕೊಟ್ಟಿದ್ದಾರೆ. ಯಾರು ತೀರ್ಮಾನ ಮಾಡುತ್ತಾರೆ? ಹೇಗೆ ಮಾಡುತ್ತಾರೆ? ಅವರ ಪಕ್ಷದ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.