ಬೆಂಗಳೂರು‘- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರಿನಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 66/11ಕೆ.ವಿ ಟೆಲಿಕಾಂ ವಿದ್ಯುತ್ ಉಪ ಕೇಂದ್ರದಲ್ಲಿ , 11ಕೆ,ವಿ ಬ್ಯಾಂಕ್-2 ನ ಬ್ರೇಕರ್ಗಳನ್ನು ಬದಲಿಸುವ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಪವರ್ ಕಟ್ ಇರಲಿದೆ.
ಬಿನ್ನಿ ಪೇಟ್, ಪಾದರಾಯನಪುರ, ಜೆ.ಜೆ.ಆರ್ ನಗರ, ಗೋಪಾಲನ್ ಮಾಲ್, ಓಬಳೇಶ್ ಕಾಲೋನಿ, ರೋಸ್ ಗಾರ್ಡನ್, ರಾಯಪುರ, ಮೈಸೂರು ರಸ್ತೆ 1ನೇ, 2ನೇ, 3ನೇ ಅಡ್ಡ ರಸ್ತೆಗಳು, ಮೋಮಿಂಪುರ, ಜನತಾ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, , ಶಾಮಣ್ಣ ಗಾರ್ಡನ್, ರಫತ್ ನಗರ, ರಂಗನಾಥ್ ಕಾಲೋನಿ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಗೋಪಾಲನ್ ವಸತಿ ಸಮುಚ್ಚಯ, ಭುವನೇಶ್ವರಿ ನಗರ, , ಹೊಸ ಪೊಲೀಸ್ ಕ್ವಾಟ್ರಸ್, ಎಸ್ಡಿ ಮಠ, ಸುಲ್ತಾನ್ ಪೇಟೆ, ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗಾರ್ಡನ್, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.