ಅಜಯ್ ದೇವಗನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಸಿಂಘಂ ಅಗೇನ್’ ಸಿನಿಮಾದ ಟ್ರೇಲರ್ ಈಗಾಗಲೇ ಸಖತ್ ಸದ್ದು ಮಾಡಿದೆ. ನವೆಂಬರ್ 1ರಂದು ಈ ಸಿನಿಮಾ ರಿಲೀಸ್ ಆಗಲಿದ್ದು ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾ. ಚಿತ್ರದಲ್ಲಿ ರೆ ಹಲವು ಸ್ಟಾರ್ ಕಲಾವಿದರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂತೆಯೇ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಕೂಡ ನಟಿಸಬೇಕಿತ್ತು. ಆದರೆ ಕೊನೇ ಕ್ಷಣದಲ್ಲಿ ಸಲ್ಮಾಣ್ ಪಾತ್ರವನ್ನು ಕ್ಯಾನ್ಸಲ್ ಮಾಡಲಾಗಿದೆ.
‘ಸಿಂಘಂ ಅಗೇನ್’ ಸಿನಿಮಾದಲ್ಲಿ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮುಂತಾದ ಕಲಾವಿದರು ಅತಿಥಿ ಪಾತ್ರ ನಿಭಾಯಿಸಿದ್ದಾರೆ. ಎಲ್ಲರ ಪಾತ್ರಗಳು ಟ್ರೇಲರ್ನಲ್ಲಿ ಹೈಲೈಟ್ ಆಗಿವೆ. ಆದರೆ ಸಲ್ಮಾನ್ ಖಾನ್ ಅವರ ಪಾತ್ರದ ಶೂಟಿಂಗ್ ಮಾಡುವುದು ಇನ್ನೂ ಬಾಕಿ ಕಿತ್ತು. ಚುಲ್ ಬುಲ್ ಪಾಂಡೆಯಾಗಿ ಸಲ್ಮಾನ್ ಖಾನ್ ಅವರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ ಈ ಸಿನಿಮಾದಲ್ಲಿ ಕೊನೆ ಕ್ಷಣದಲ್ಲಿ ನಟಿಸದೆ ಇರಲು ಸಲ್ಮಾನ್ ನಿರ್ಧರಿಸಿದ್ದಾರೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಅಕ್ಟೋಬರ್ 14ರಂದು ಸಲ್ಮಾನ್ ಖಾನ್ ಅವರು ‘ಸಿಂಘಂ ಅಗೇನ್’ ಸಿನಿಮಾದ ಶೂಟಿಂಗ್ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಕ್ಟೋಬರ್ 12ರಂದು ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಕಿ ಹತ್ಯೆ ಮಾಡಲಾಯಿತು. ಆ ಘಟನೆಯಿಂದ ಸಲ್ಮಾನ್ ಖಾನ್ ಸಖತ್ ವಿಚಲಿತರಾದರು. ಇಂಥ ಸಂದರ್ಭದಲ್ಲಿ ಅವರನ್ನು ಶೂಟಿಂಗ್ಗೆ ಬನ್ನಿ ಅಂತ ಕರೆಯುವುದು ಸೂಕ್ತವಲ್ಲ ಎಂದು ನಿರ್ದೇಶಕ ರೋಹಿತ್ ಶೆಟ್ಟಿ ಅವರು ಆ ಪಾತ್ರವನ್ನೇ ಕೈ ಬಿಡುವ ನಿರ್ಧಾರ ಮಾಡಿದರು ಎನ್ನಲಾಗಿದೆ.
ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಸಲ್ಮಾನ್ ಖಾನ್ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಪರಿಸ್ಥಿತಿ ಹೀಗಿರುವಾಗ ಅವರನ್ನು ಅತಿಥಿ ಪಾತ್ರದ ಶೂಟಿಂಗ್ಗೆ ಕರೆಯೋದು ಸರಿ ಇಲ್ಲ ಎಂದು ರೋಹಿತ್ ಶೆಟ್ಟಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.