ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ವರುಣನ ಆರ್ಭಟಕ್ಕೆ ಬೆಂಗಳೂರಿನ ಬೀದಿಬೀದಿಗಳಲ್ಲಿ ವರುಣನ ಎಂಟ್ರಿಯಿಂದ ನೀರು ಉಕ್ಕಿ ಹರಿಯುತ್ತಿವೆ. ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಹೌದು ಆಟವಾಡಲು ಹೋಗಿದ್ದ ಅಣ್ಣ-ತಂಗಿ ಕೆಂಗೇರಿ ಕೆರೆ ಬಳಿ ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ.
ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರಾಗಿದ್ದು, ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು.
KPTCL Jobs 2024: SSLC ಪಾಸಾದವರಿಗೆ ಕರ್ನಾಟಕ ವಿದ್ಯುತ್ ನಿಗಮದಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಇಂದೇ ಅರ್ಜಿ ಸಲ್ಲಿಸಿ
ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆದಿದೆ. ಕೆಂಗೇರಿ ಕೆರೆ ಬಳಿ ನಾಗಮ್ಮರ ಆಕ್ರಂದನ ಮುಗಿಲು ಮುಟ್ಟಿದೆ.