ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಸ್ಪೋಟಕ ಬ್ಯಾಟರ್ ರೀ ಎಂಟ್ರಿ ಕೊಡಲಿದ್ದಾರೆ. ಅಕ್ಟೋಬರ್ 24 ರಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ.
ಮೂರು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು: ಟೆಂಗಿನಕಾಯಿ ವಿಶ್ವಾಸ
ಈ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ.
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಯುವ ದಾಂಡಿಗ ಶುಭ್ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಗಿಲ್ ಈಗ ಸಂಪೂರ್ಣ ಫಿಟ್ ಆಗಿದ್ದು, ಪುಣೆಯಲ್ಲಿ ನಡೆಯಲಿರುವ 2ನೇ ಪಂದ್ಯಕ್ಕೆ ಲಭ್ಯರಿರಲಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಶುಭ್ಮನ್ ಗಿಲ್ ಕತ್ತು ಮತ್ತು ಭುಜದ ನೋವಿಗೆ ಒಳಗಾಗಿದ್ದರು. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ಗಿಲ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಸರ್ಫರಾಝ್ ಖಾನ್ ಕಾಣಿಸಿಕೊಂಡಿದ್ದರು.
ಇದೀಗ ಶುಭ್ಮನ್ ಗಿಲ್ ಆಗಮನದೊಂದಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಿಂದ ಒಬ್ಬ ಆಟಗಾರ ಹೊರಬೀಳಲಿದ್ದಾರೆ. ಇಲ್ಲಿ ಮೊದಲ ಪಂದ್ಯದಲ್ಲಿ ಸರ್ಫರಾಝ್ ಖಾನ್ 150 ರನ್ ಬಾರಿಸಿರುವ ಕಾರಣ ಅವರನ್ನು ಕೈ ಬಿಡುವ ಸಾಧ್ಯತೆಯಿಲ್ಲ ಎನ್ನಬಹುದು. ಆದರೆ ಗಿಲ್ಗೆ ಸ್ಥಾನ ಕಲ್ಪಿಸಲು ಓರ್ವ ಬ್ಯಾಟರ್ನನ್ನು ಕೈ ಬಿಡಬೇಕಾದ ಅನಿವಾರ್ಯತೆಯಂತು ಇದೆ.