ಬೆಂಗಳೂರು:- ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐದು ಜನ ಮೃತಪಟ್ಟಿರುವ ಘಟನೆ ನಡೆದಿದೆ.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭರ್ಜರಿ ಮಳೆ: ಅಲರ್ಟ್ ಘೋಷಣೆ!
ರಾತ್ರಿಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆಯಿತು. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.
ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ. 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.