ವಿಜಯನಗರ::-ವಾಂತಿ-ಭೇದಿಯಿಂದ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದು, ಕಲುಷಿತ ನೀರು ಸೇವಿಸಿರೋ ಶಂಕೆ ವ್ಯಕ್ತವಾಗಿದೆ.
ಭಕ್ತಾದಿಗಳಿಗೆ ಗುಡ್ ನ್ಯೂಸ್: ನಾಳೆಯಿಂದ ಹಾಸನಾಂಬ ದೇಗುಲ ಬಾಗಿಲು ಓಪನ್, 9 ದಿನ ದರ್ಶನಕ್ಕೆ ಅವಕಾಶ!
30 ವರ್ಷದ ಸುರೇಶ, 45 ವರ್ಷದ ಮಹಾಂತೇಶ್, 60 ವರ್ಷದ ಗೌರಮ್ಮ , 38 ವರ್ಷದ ಹನುಮಂತಪ್ಪ ಮತ್ತು ಎಂಟು ತಿಂಗಳ ಗಂಡು ಮಗು ಮೃತಪಟ್ಟಿದೆ. ಇವರ ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ.
ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮಕ್ಕೆ ಕಳೆದ 15 ದಿನಗಳಿಂದ ಕಲುಷಿತ ನೀರು ಸರಬರಾಜು ಆಗುತ್ತಿದೆ. ಇದನ್ನು ತಿಳಿಯದೆ ಗ್ರಾಮಸ್ಥರು ನೀರು ಕುಡಿಯುತ್ತಿದ್ದಾರೆ. ಇದರಿಂದ ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗರ್ಭಿಣಿ ನಿಂಗಮ್ಮ ಎಂಬುವರು ವಾಂತಿ-ಭೇದಿಯಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಂಗಮ್ಮ ಅವರಿಗೆ ವಾಂತಿ-ಭೇದಿ ತೀವ್ರವಾದ ಹಿನ್ನೆಲೆಯಲ್ಲಿ ಗರ್ಭದಲ್ಲಿನ ಮಗು ಮೃತಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಕಳೆದ ವಾರ ಮೂವರು ಮೃತಪಟ್ಟಿದ್ದಾರೆ. ಇದೀಗ ಇಬ್ಬರು ಮೃತಪಟ್ಟಿದ್ದಾರೆ.
ನವಜಾತ ಶಿಶು ಸೇರಿದಂತೆ ಐವರ ಸಾವರಿಗೆ ಕಲುಷಿತ ನೀರು ಸೇವನೆ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. “ಕಲುಷಿತ ನೀರು ಸೇವಿಸಿ ಐವರು ವಾಂತಿ-ಭೇದಿಯಿಂದ ಬಳಲುತ್ತಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿದೇವು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ, ತಾಲೂಕು ಆರೋಗ್ಯ ಅಧಿಕಾರಿಗಳು ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿರುವುದನ್ನು ದೃಢಪಡಿಸಿಲ್ಲ. ಸದ್ಯ ನೀರನ್ನು ತಪಾಸಣೆಗೆ ಕಳುಹಿಸಲಾಗಿದೆ.