ತುಮಕೂರು: ಬುದ್ದಿಮಾಂದ್ಯ ಮಹಿಳೆಯನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ 15 ವರ್ಷ ಕಠಿಣ ಕಾರಾಗೃಹ ಹಾಗೂ ಒಂದು ಲಕ್ಷ ರೂ ದಂಡ ವಿಧಿಸಲಾಗಿದೆ. ಹೌದು ತಿಮ್ಮಪ್ಪ (65) ಎಂಬಾತನಿಗೆ ಮಧುಗಿರಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 15 ವರ್ಷ ಶಿಕ್ಷೆ, ₹1 ಲಕ್ಷ ದಂಡ ವಿಧಿಸಿದೆ. ಸರಿಯಾಗಿ ಮಾತನಾಡಲು ಬಾರದ, ಸದಾ ಮನೆಯಲ್ಲಿ ಇರುತ್ತಿದ್ದ ಬುದ್ಧಿಮಾಂದ್ಯ ಮಹಿಳೆ ಮೇಲೆ 2021ರ ಸೆ. 6ರಂದು ತಿಮ್ಮಪ್ಪ ಅತ್ಯಾಚಾರ ವೆಸಗಿದ್ದನು.
ಪದೇ, ಪದೇ ಮೂತ್ರ ವಿಸರ್ಜನೆ ಹೋಗ್ತಿದ್ರೆ ಜೋಪಾನ! ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣ
ಬಡವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಎಚ್.ಜಿ.ಹನುಮಂತರಾಯಪ್ಪ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಯಾದವ ಕರಕೇರ ಮಂಗಳವಾರ ವಿಚಾರಣೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣ ಹಾಗೂ ಹೆಚ್ಚುವರಿ ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಬಿ.ಎಂ.ನಿರಂಜನಮೂರ್ತಿ ವಾದ ಮಂಡಿಸಿದ್ದರು