ಕೋಲಾರ: ರಾಜ್ಯಮಟ್ಟದಲ್ಲಿ ಪ್ಯಾರಾ ದಿವ್ಯಾಂಗ ಸ್ಪೋರ್ಟ್ಸ್ ಅಸೋಸಿಯೇಷನ್ ಕೋಲಾರದಲ್ಲಿ ಪ್ರಾರಂಭಿಸುತ್ತಿದ್ದು ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ದಿವ್ಯಾಂಗ ಮಕ್ಕಳಿಗೆ ತರಭೇತಿ ನಿಡಲಾಗುವುದು ಎಂದು ಪ್ಯಾರಾ ಓಲಂಪಿಕ್ ನೂತನ ಅಧ್ಯಕ್ಷ ಕೆ.ಜಯದೇವ್ ತಿಳಿಸಿದರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು,
ಪ್ಯಾರಾ ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವ ದಿವ್ಯಾಂಗ ಆಟಗಾರರು ತಮ್ಮದೇ ಆದ ಸಾಧನೆಯನ್ನು ಮಾಡುವುದರೊಂದಿಗೆ ಇಡೀ ಜಗತ್ತಿಗೆ ಸಾಮರ್ಥ್ಯವನ್ನು ತೋರಿಸಿದ್ದಾರೆ ಈ ಹಿನ್ನೆಲೆಯಲ್ಲಿ ಕೋಲಾರ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಮಾಡಲಾಗಿದೆ ಅಂಗವಿಕಲರ ಮಕ್ಕಳನ್ನು ಗುರುತಿಸಿ ರಾಷ್ಟ್ರ ಮಟ್ಟ ಹಾಗೂ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಮಕ್ಕಳಿಗೆ ಪ್ಯಾರಾ ಓಲಂಪಿಕ್ ಅಸೋಸಿಯೇಷನ್ ವತಿಯಿಂದ ಅವಕಾಶ ಕಲ್ಪಿಸುವ ಗುರಿಯನ್ನು ನಮ್ಮ ಘಟಕ ಹೊಂದಿದೆ ಎಂದು ತಿಳಿಸಿದರು.