ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದಿನಿಂದ ಭಾರತ vs ನ್ಯೂಝಿಲೆಂಡ್ 2ನೇ ಟೆಸ್ಟ್ ಶುರುವಾಗಲಿದೆ.
ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡ ಸೋತಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.
ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಟೀಮ್ ಇಂಡಿಯಾ ಪುಣೆಯಲ್ಲಿ ಇಂದಿನಿಂದ ಶುರುವಾಗಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲಲೇಬೇಕು. ಒಂದು ವೇಳೆ ಸೋತರೆ ಸರಣಿ ನ್ಯೂಝಿಲೆಂಡ್ ತಂಡದ ವಶವಾಗಲಿದೆ.
ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಈವರೆಗೆ ಕೇವಲ ಮೂರು ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಇದೀಗ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿರುವ ನ್ಯೂಝಿಲೆಂಡ್ ತಂಡವು ಎರಡನೇ ಅಥವಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು.
ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಸರಣಿ ಗೆಲ್ಲಲು ನ್ಯೂಝಿಲೆಂಡ್ ತಂಡಕ್ಕೆ ಉತ್ತಮ ಅವಕಾಶವಿದೆ. ಈ ಅವಕಾಶವನ್ನು ಬಳಸಿಕೊಳ್ಳುವ ಮೂಲಕ ಕಿವೀಸ್ ಪಡೆ ಭಾರತದಲ್ಲಿ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ