ಮುಂಬೈ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಗ್ಯಾಂಗ್ಸ್ಟರ್ ಶಿಕ್ಷೆಯನ್ನು ಅಮಾನತುಗೊಳಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ ರಾಜನ್ಗೆ 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಶ್ಯೂರಿಟಿಯನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.
2001ರ ಮೇ 4 ರಂದು ದಕ್ಷಿಣ ಮುಂಬೈನ ಗೋಲ್ಡನ್ ಕ್ರೌನ್ ಹೋಟೆಲ್ ಮಾಲೀಕ ಜಯ ಶೆಟ್ಟಿ ಎಂಬವರ ಹತ್ಯೆಯಾಗಿತ್ತು. ಇಬ್ಬರು ಅಪರಿಚಿತ ವ್ಯಕ್ತಿಗಳು, ಜಯ ಶೆಟ್ಟಿ ಅವರನ್ನು ಗುಂಡಿಕ್ಕಿ ಕೊಂದಿದ್ದರು. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ವಿಶೇಷ ನ್ಯಾಯಾಲಯವು ಗ್ಯಾಂಗ್ಸ್ಟರ್ ರಾಜನ್ನನ್ನು ದೋಷಿ ಎಂದು ಘೋಷಿಸಿತ್ತು. ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತು.
DRDO CAIR Recruitment: ಎಂಜಿನಿಯರಿಂಗ್ ಮುಗಿಸಿದ್ರೂ ಕೆಲಸ ಸಿಗ್ತಿಲ್ವಾ.? ಇಲ್ಲಿದೆ ನೋಡಿ ಜಾಬ್ ಆಫರ್
ಪತ್ರಕರ್ತ ಜ್ಯೋತಿರ್ಮಯ್ ಡೇ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಜನ್ಗೆ ಇದು ಎರಡನೇ ಜೀವಾವಧಿ ಶಿಕ್ಷೆಯಾಗಿತ್ತು. ಎರಡೂ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿರಲಿಲ್ಲ. ರಾಜನ್ನನ್ನು 2015 ರಲ್ಲಿ ಇಂಡೋನೇಷ್ಯಾದಿಂದ ಭಾರತಕ್ಕೆ ಗಡೀಪಾರು ಮಾಡಿದ ನಂತರ ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲಾದ 71 ಪ್ರಕರಣಗಳಲ್ಲಿ ಜಯ ಶೆಟ್ಟಿ ಕೊಲೆ ಪ್ರಕರಣವೂ ಸೇರಿದೆ.