ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಖುಷಿ ಆಗಿದೆ. ಹೌದು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಈ ಬಾರಿ ನಾಯಕ ಕೆ.ಎಲ್ ರಾಹುಲ್ ಅವರನ್ನು ಹರಾಜಿಗೆ ಮುಂಚಿತವಾಗಿ ತಂಡದಿಂದ ಬಿಡುಗಡೆಗೊಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. 2025ರ ಐಪಿಎಲ್ ಬೆಳವಣಿಗೆ ಆರಂಭವಾದಾಗಿನಿಂದಲೂ ಕೆ.ಎಲ್ ರಾಹುಲ್ ಆರ್ಸಿಬಿ ಸೇರಲಿದ್ದಾರೆ ಎಂಬ ಸುದ್ದಿ ದೊಟ್ಟಮಟ್ಟದಲ್ಲಿ ಸದ್ದು ಮಾಡಿತ್ತು.
ಕನ್ನಡಿಗರು ಇದರಿಂದ ಸಂತಸಗೊಂಡಿದ್ದರು. ಇದೀಗ ಲಕ್ನೋ ಫ್ರಾಂಚೈಸಿ ರಾಕೆಟ್ ವೇಗಿ ಮಯಾಂಕ್ ಯಾದವ್ ಅವರನ್ನು 14 ಕೋಟಿ ರೂ.ಗೆ ರಿಟೇನ್ ಮಾಡಿಕೊಳ್ಳಲು ಮುಂದಾಗಿದ್ದು, ಕೆ.ಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡುವ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಮುಂದಿನ ಐಪಿಎಲ್ನಲ್ಲಿ ಕನ್ನಡಿಗ ಮತ್ತೆ ಆರ್ಸಿಬಿ ಸೇರ್ತಾರೆ ಅನ್ನೋ ಮಾತುಗಳು ಕೇಳಿಬಂದಿವೆ.
DRDO CAIR Recruitment: ಎಂಜಿನಿಯರಿಂಗ್ ಮುಗಿಸಿದ್ರೂ ಕೆಲಸ ಸಿಗ್ತಿಲ್ವಾ.? ಇಲ್ಲಿದೆ ನೋಡಿ ಜಾಬ್ ಆಫರ್
2022ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ನಾಯಕನಾಗಿದ್ದ ಕೆ.ಎಲ್ ರಾಹುಲ್ (KL Rahul) ಸತತ 2 ಬಾರಿ ತಂಡವನ್ನು ಪ್ಲೇ ಆಫ್ ಪ್ರವೇಶಿಸುವಂತೆ ಮಾಡಿದ್ದರು. ಆದ್ರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. 2024ರ ಐಪಿಎಲ್ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು.
ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್ ಗೋಯೆಂಕಾ ರಾಹುಲ್ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯಿಂದ ರಾಹುಲ್, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದು, ಮೆಗಾ ಹರಾಜಿಗೂ ಮುನ್ನ ರಾಹುಲ್ ಆರ್ಸಿಬಿ ತಂಡ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಈಗಾಗಲೇ 2025 ರಿಂದ 2027ರ ಐಪಿಎಲ್ ಆವೃತ್ತಿಗಳಿಗೆ ಹೊಸ ನಿಯಮಗಳನ್ನು ಘೋಷಣೆ ಮಾಡಿರುವ ಬಿಸಿಸಿಐ, ನವೆಂಬರ್ 24 ಮತ್ತು 25 ರಂದು ರಿಯಾದ್ನಲ್ಲಿ ಮೆಗಾ ಹರಾಜು ನಡೆಸಲು ತೀರ್ಮಾನಿಸಿದೆ. ಅದಕ್ಕಾಗಿ ಇದೇ ಅಕ್ಟೋಬರ್ 31ರ ಸಂಜೆ 5 ಗಂಟೆ ಒಳಗೆ ತಂಡದಲ್ಲಿ ಉಳಿಕೊಳ್ಳಬಹುದಾದ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ.