ಬೆಂಗಳೂರು:- ಯೋಗೇಶ್ವರ್ ವಿರುದ್ಧ ನಿಖಿಲ್ ಹೆಚ್ಚು ಮತಗಳ ಅಂತರದಿಂದ ಗೆಲ್ತಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿಯೆಂದು ಘೋಷಣೆಯಾದ ಬಳಿಕ ಮಾತನಾಡಿದ ಅವರು, ನಿಖಿಲ್ ಪರ ಮತದಾರರ ಸಹಾನುಭೂತಿ ಇದೆ ಮತ್ತು ಅವರು ಎನ್ಡಿಎ ಪರವಾಗಿ ಸ್ಪರ್ಧೆ ಮಾಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಕ್ಯಾಂಡಿಡೇಟ್ ಕೂಡ ಹೌದು, ಲೋಕಸಭಾ ಚುನಾವಣೆಯಲ್ಲಿ ಜನ ಎನ್ಡಿಎ ಒಕ್ಕೂಟವನ್ನು ಗೆಲ್ಲಿಸಿದ ಹಾಗೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ರನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ.