ಹುಬ್ಬಳ್ಳಿ: ಇಂದು ನಾಮಪತ್ರ ಸಲ್ಲಿಸಲು ಶಿಗ್ಗಾಂವಿಗೆ ತೆರಳುತ್ತಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್ ಶಾಸಕರೇ ಭ್ರಮನಿರಸರಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಆಗದೇ ಇರುವ ಹಿನ್ನೆಲೆ ಅವರ ಪಕ್ಷದವರೇ ಅಸಮಾಧಾನದಲ್ಲಿದ್ದಾರೆಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಈ ಭಾಗದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನ ಮಾಡಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಸಹ ಶಿಗ್ಗಾವಿಯಲ್ಲಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ. ಅತೀ ಹೆಚ್ಚು ಮತಗಳ ಅಂತರದಿಂದ ಭರತ್ ಬೊಮ್ಮಾಯಿ ಗೆಲುವು ಸಾಧಿಸಲಿದ್ದಾರೆ. ಶಿಗ್ಗಾವಿ ಕ್ಷೇತ್ರಕ್ಕೆ ನನ್ನ ಹೆಸರು ಸಹ ಕೇಳಿ ಬಂದಿತ್ತು.
Free Gas Cylinder: ಗ್ರಾಹಕರಿಗೆ ಗುಡ್ ನ್ಯೂಸ್! ಈ ಯೋಜನೆಯಡಿ ದೀಪಾವಳಿ ಹಬ್ಬಕ್ಕೆ ಸಿಗಲಿದೆ ಫ್ರೀ ಸಿಲಿಂಡರ್!
ಈ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರಿಗೆ ಸ್ಪರ್ಧೆ ಮಾಡಲ್ಲ ಅಂತಾ ಹೇಳಿದ್ದೆ. ಈ ಭಾಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳಿದ್ದಾರೆ. ಹಾಗಾಗಿ ನಾನು ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ್ದೆ. ಪಕ್ಷ ಸೂಚಿಸಿರುವ ಅಭ್ಯರ್ಥಿ ಗೆಲುವುಗೆ ಶ್ರಮಿಸುವುದಾಗಿ ಹೇಳಿದ್ದೆ. ಒಂದು ವಾರಗಳ ಕಾಲ ಶಿಗ್ಗಾವಿಯಲ್ಲೇ ನಾವು ಬೀಡುಬಿಟ್ಟು ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಲಿದ್ದೇವೆ ಎಂದರು.