ಬೆಂಗಳೂರು:- ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.
ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳು, ಉತ್ತರ ಕನ್ನಡ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.