ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಸೇರಿದ್ದರು. ಎನ್ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಐತಿಹಾಸಿಕ ಸಭೆ ಆಗಿತ್ತು. ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ ಎಂದು ದೂರಿದರು.
ಈ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ನಂತರ ಒಂದು ನೊಟೀಸ್ ಕೊಟ್ಟಿದ್ದಾರೆ. ಬರುವವರ ಮೇಲೆಲ್ಲಾ ಕೇಸ್ ಹಾಕಿಕೊಂಡು ಇವರು ಚುನಾವಣೆ ನಡೆಸಲು ಹೊರಟಿದ್ದಾರೆ. ಶುಕ್ರವಾರ ನಮ್ಮ ಪಕ್ಷದ ಅಧ್ಯಕ್ಷರಿಗೆ ನೊಟೀಸ್ ಕೊಟ್ಟಿದ್ದಾರೆ. ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆ ಇಲ್ಲ. ಜನರ ಬಳಿ ನಾವು ಮತ ಕೇಳುತ್ತೇವೆ. ಅವರೇ ತೀರ್ಪು ಕೊಡುತ್ತಾರೆ ಎಂದು ಗುಡುಗಿದರು.
ATMನಲ್ಲಿ ಹರಿದ ನೋಟುಗಳು ಬಂದ್ರೆ ಏನ್ ಮಾಡ್ಬೇಕು.? RBI ನಿಯಮಗಳೇನು ಗೊತ್ತಾ..?
ಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೊಟೀಸ್ ನೀಡಿದೆ. ಸಿಎಂ, ಡಿಸಿಎಂ ಆದಿಯಾಗಿ ಅವರ ಕಡೆಯಿಂದ ಎಲ್ಲಾರೂ ಚನ್ನಪಟ್ಟಣಕ್ಕೆ ಹೀಗಿದ್ದರಲ್ಲವೇ? ಹಾಗಿದ್ದರೆ, ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡೇ ಇರಲಿಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದರು. ಶನಿವಾರ ನಮ್ಮ ಕಾರ್ಯಕ್ರಮಕ್ಕೆ ಬಂದವರ ವಿಡಿಯೋ ಮಾಡಿಕೊಂಡು, ಅಧಿಕಾರಿಗಳಿಗೆ ಹೇಳಿ ಕೇಸ್ ಹಾಕಿಸಿ ಯಾವ ಚುನಾವಣೆ ನಡೆಸಲು ಹೋಗುತ್ತಿದ್ದಾರೆ ಇವರು?
ನಮ್ಮ ಪಕ್ಷದ ಅಧ್ಯಕ್ಷರಿಗೆ ಇದರ ಬಗ್ಗೆ ಒಂದು ನೋಟಿಸ್ ಕೊಟ್ಟಿದ್ದಾರೆ. ದಬ್ಬಾಳಿಕೆ ಮೂಲಕ ಇವರು ಚುನಾವಣೆ ನಡೆಸಲು ಹೋಗುತ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡುತ್ತಿದೆ ಸರ್ಕಾರ. ಇದೆಲ್ಲವನ್ನೂ ನಾವು ಮೊದಲೇ ನಿರೀಕ್ಷೆ ಮಾಡಿದ್ದೆವು ಎಂದು ಕಿಡಿಕಾರಿದರು. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಸೇರಿದಂತೆ ಮೂರೂ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.