ಕೆ.ಆರ್.ಪುರ: ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಶಿಕ್ಷಕರು ಸಹನೆ, ತಾಳ್ಮೆ ರೂಢಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಬಿ.ಎ.ಬಸವರಾಜ ಹೇಳಿದರು.
ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!? ಹಾಗಿದ್ರೆ ಇಲ್ಲಿದೆ ಬಂಪರ್ ಉದ್ಯೋಗವಕಾಶ!
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕ್ಷೇತ್ರದ ದೇವಸಂದ್ರ ವಾರ್ಡನ ಬಿ.ನಾರಾಯಪುರ ಶಾಲೆಯಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳ ಸಂಘವನ್ನು ಶಾಸಕ ಬಿ.ಎ.ಬಸವರಾಜ ಉದ್ಘಾಟಿಸಿ ಮಾತನಾಡಿದ
ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು,ಕಲ್ಲಿಗೆ ಶಿಲ್ಪಿಯೂ ರೂಪ ನೀಡುವಂತೆ ಶಿಕ್ಷಕರು ಮಕ್ಕಳ ಜೀವನವನ್ನು ಉಜ್ವಲವಾಗುವಂತೆ ಮಾಡುತ್ತಾರೆ ಎಂದು ತಿಳಿಸಿದರು.
ಶಿಕ್ಷಕ ವೃತ್ತಿ ಎನ್ನುವುದು ಸನ್ಯಾಸತ್ವ ಸ್ವೀಕಾರ ಮಾಡಿದಂತೆ. ಒಬ್ಬ ಸ್ಫೂರ್ತಿ ತುಂಬುವ ಶಿಕ್ಷಕನ ಮೂಲಕ ಆ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದಲ್ಲಿ ಗುರುತಿಸಲ್ಪಡುವುದನ್ನು ನಾವು ಕಾಣುತ್ತೇವೆ ಎಂದರು.
ಗುರುಗಳಿಗೆ ನಮನ ಶ್ರೇಷ್ಠ ವಾದದ್ದು, ಅಂದು ಶಿಕ್ಷಕರು ಮಾಡಿದ ಕೆತ್ತನೆಯಿದ್ದು,ಇಂದು ಅದ್ಭುತವಾದ ಕಾರ್ಯಕ್ರಮ ನೀಡಿದೆ ಹಾಗೂ ಪ್ರಸಿದ್ಧ ಶಿಲೆಗಲಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಸರ್ಕಾರಿ ಶಾಲೆಯಲ್ಲಿ ವಿದ್ಯೆ ಕಲಿತ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಸಮಾಜ ಸೇವೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ದೇವಸಂದ್ರ ವಾರ್ಡ್ ಗೆ ಎರಡು ಹೈಟೆಕ್ ಪ್ರೈಮರಿ ಶಾಲೆಯನ್ನು ನೀಡಿದ್ದು, ಈ ಶಾಲೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿದ್ದೆನೆ ಎಂದು ಹೇಳಿದರು.
ಸುಮಾರು ಮೂವತ್ತು ವರ್ಷಗಳಿಂದ ಬಿ ನಾರಯನಪುರ ಶಾಲೆಯಲ್ಲಿ ಕಲಿತ ಎಲ್ಲಾ ವರ್ಷದ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು ವಿಷೇಶವಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡು ತಮ್ಮ ಅನಿಸಿಕೆಗಳನ್ನ ಹಂಚಿಕೊಂಡರು.ತಮಗೆ ವಿದ್ಯೆಯನ್ನ ಕಲಿಸಿದ ಎಲ್ಲಾ ಶಿಕ್ಷಕರಿಗೆ ಸನ್ಮಾನ ಗೌರವಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಬಿಇಒ ಗೋವಿಂದಪ್ಪ, ಎಸ್ ಡಿಎಂಸಿ ಅಧ್ಯಕ್ಷ ಗೋವಿಂದಪ್ಪ,
ನಾಗರಾಜ್ , ಕೃಷ್ಣಮೂರ್ತಿ, ಚಂದ್ರಶೇಖರ್ ಹಳೆಯ ವಿದ್ಯಾರ್ಥಿಗಳು ಇದ್ದರು.