ಮಂಡ್ಯ:- ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಉಪತಹಶೀಲ್ದಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ಆಘಾತಕಾರಿ ಮಾಹಿತಿ: 100 ಜನರಲ್ಲಿ 88 ಜನರು ಮಾನಸಿಕ ಅಸ್ವಸ್ಥತೆಗೆ ಬಲಿಯಾಗುತ್ತಿದ್ದಾರಂತೆ!
ಬೀರೂರು ಮೂಲದ ಎನ್.ಟಿ.ಸುನೀಲ್ ಎಂದು ಗುರುತಿಸಲಾಗಿದೆ.ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.19ರಂದು ರಾತ್ರಿ 9:30ಕ್ಕೆ ಕೊಳ್ಳೇಗಾಲ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಬಳಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ