ಹುಬ್ಬಳ್ಳಿ :ಮಧ್ಯ ಕರ್ನಾಟಕ ಭಾಗವಾಗಿರುವ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಣಗೊಂಡಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೂ ಪೂರಕವಾಗಿರುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಹೇಳಿದರು.
ನ್ಯೂಝಿಲೆಂಡ್ ವಿರುದ್ಧ ಹೀನಾಯ ಸೋಲು: ಭಾರತೀಯ ಆಟಗಾರರನ್ನು ಅಣಕಿಸಿದ ವಿದೇಶಿ ಕ್ರಿಕೆಟಿಗ!
ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ನಗರದ ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಮಕೂರಿನಿಂದ 60 ಕಿಮೀ ದೂರದಲ್ಲಿ ಚಿತ್ರದುರ್ಗ ಇದೆ.
ಹೀಗಾಗಿ, ಬೆಂಗಳೂರಿನಿಂದ ಚಿತ್ರದುರ್ಗದವರೆಗೆ ಕೈಗಾರಿಕೆಗಳು ಸ್ಥಾಪನೆಗೊಂಡರೆ ಈ ಭಾಗಕ್ಕೂ ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕಕ್ಕೂ ಕೈಗಾರಿಕೆಗಳು ಬರುತ್ತವೆ ಎಂದರು. ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂಬ ಮುಖ್ಯಮಂತ್ರಿಯವರ ಹೇಳಿಕೆಗೆ ಇದೇ ಕಾರಣಕ್ಕಾಗಿ ತುಮಕೂರಿನ ಹೆಸರು ಹೇಳಿದ್ದಾಗಿ ಸ್ಪಷ್ಟಪಡಿಸಿದರು.
ಅಂತಾರಾಷ್ಟ್ರೀಯ ಗುಣಮಟ್ಟದ ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಏಕ ಕಾಲಕ್ಕೆ 8 ವಿಮಾನಗಳು ನಿಲುಗಡೆಗೊಳ್ಳಲಿವೆ. ಇಲ್ಲಿಯೂ ಪ್ರಯಾಣಿಕರ ಸಂಚಾರ, ಸರಕು ಸಾಗಣೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯವಾಗುತ್ತದೆ ಎಂದು ಹೇಳಿದರು.
ಎನ್ಜಿಇಎಫ್ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನ ನೀಡಬೇಕು. ಹುಬ್ಬಳ್ಳಿ-ಧಾರವಾಡದಲ್ಲಿ ತ್ಯಾಜ್ಯದ ಗುಡ್ಡವನ್ನು ಕರಗಿಸಲು ಅನುಭವ ಇರುವ ಗುತ್ತಿಗೆದಾರರಿಗೆ ಟೆಂಡರ್ ನೀಡಿದ್ದು, ಶೀಘ್ರ ಕಾರ್ಯ ಆರಂಭಗೊಳ್ಳಲಿದೆ ಎಂದರು.
ಹುಬ್ಬಳ್ಳಿಯಲ್ಲಿ ಈಗಿರುವ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳುಳ್ಳ ಮನವಿಯಯನ್ನು ಸಂಘದ ವತಿಯಿಂದ ಅರವಿಂದ ಬೆಲ್ಲದ ಅವರಿಗೆ ನೀಡಲಾಯಿತು.
ಸಂಘದ ಅಧ್ಯಕ್ಷ ಗಿರೀಶ ನಲವಡಿ. ಕಾರ್ಯದರ್ಶಿ ಶಂಕರ ಹಿರೇಮಠ, ಮಾಜಿ ಅಧ್ಯಕ್ಷ ಜೆ.ಸಿ. ಮಠದ, ಅಶೋಕ ಕುನ್ನೂರ ಹಾಗೂ ಇತರರು ಹಾಜರಿದ್ದರು.