IPL 2025ರ ಮೆಗಾ ಆಕ್ಷನ್ನಲ್ಲಿ ಕನ್ನಡಿಗ KL ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.
ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ 200 ರೂ.ಗೆ ನಿಗದಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ
ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಬಯಸಿತ್ತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ರಾಹುಲ್ ಅವರಿಂದ ಸಕರಾತ್ಮಕ ಸ್ಪಂದನೆ ದೊರೆತಿಲ್ಲ. ಹೀಗಾಗಿ ಕನ್ನಡಿಗನನ್ನು ಕೈ ಬಿಡಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ.
ಕಳೆದ ಮೂರು ಸೀಸನ್ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಆದರೆ ಅವರ ನಾಯಕತ್ವದಲ್ಲಿ ತಂಡವು ಸತತ ವೈಫಲ್ಯ ಅನುಭವಿಸಿತ್ತು. ಇದೇ ಕಾರಣದಿಂದಾಗಿ ಕಳೆದ ಸೀಸನ್ನಲ್ಲಿ ಎಸ್ಆರ್ಹೆಚ್ ವಿರುದ್ಧದ ಪಂದ್ಯದ ಬಳಿಕ ರಾಹುಲ್ ಅವರನ್ನು ಎಲ್ಎಸ್ಜಿ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡಿದ್ದರು.
ಇದಾದ ಬಳಿಕ ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಬಳಿಕ ಸಂಜೀವ್ ಗೊಯೆಂಕಾ ಜೊತೆ ಕಾಣಿಸಿಕೊಳ್ಳುವ ಮೂಲಕ ಕೆಎಲ್ ರಾಹುಲ್ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಗೊಯೆಂಕಾ ಕೂಡ ಕೆಎಲ್ ರಾಹುಲ್ ನಮ್ಮ ಕುಟುಂಬದ ಅಂಗ ಎಂದಿದ್ದರು.
ಆದರೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಒಡಂಬಡಿಕೆಗೆ ಕೆಎಲ್ ರಾಹುಲ್ ಸಿದ್ಧರಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿಯೇ ಐಪಿಎಲ್ ಮೆಗಾ ಹರಾಜಿಗೂ ಮುನ್ನ ನಾಯಕನನ್ನು ತಂಡದಿಂದ ಕೈ ಬಿಡಲು ಎಲ್ಎಸ್ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.