ಮುಂಬೈ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶಕ್ಕೆ ತೆರಳಲು ರೈಲನ್ನು ಹತ್ತುವ ಸಂದರ್ಭದಲ್ಲಿ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಗೋರಖ್ಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಯತ್ನಿಸಿದಾಗ ನೂಕುನುಗ್ಗಲು ಸೃಷ್ಟಿಯಾಗಿದೆ. ಗಾಯಗೊಂಡವರ ಪೈಕಿ 7 ಮಂದಿಯ ಆರೋಗ್ಯ ಸ್ಥಿರವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶಕ್ಕೆ ತೆರಳಲು ರೈಲನ್ನು ಹತ್ತುವ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. ಬಾಂದ್ರಾದಿಂದ ಗೋರಖ್ಪುರಕ್ಕೆ ಹೋಗುವ ರೈಲು ಸಂಖ್ಯೆ 22921 ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 1ಕ್ಕೆ ಬಂದಿತ್ತು. ಗೋರಖ್ಪುರದ ಸಾಪ್ತಾಹಿಕ ರೈಲು ಭಾನುವಾರ ಬೆಳಿಗ್ಗೆ 5:10ಕ್ಕೆ ಹೊರಡಬೇಕಿತ್ತು.
ನೀವು ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇಲ್ಲಿದೆ ನೋಡಿ ಬಂಪರ್ ಯೋಜನೆ! ಕಡಿಮೆ ಸಮಯ, ಹೆಚ್ಚು ಲಾಭ!
ಆದರೆ ರೈಲು 5:56ಕ್ಕೆ ನಿಲ್ದಾಣಕ್ಕೆ ಬಂದಿದೆ. ಮೊದಲೇ ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಗಿ ಈ ಘಟನೆ ನಡೆದಿದೆ. ಗಾಯಗೊಂಡವರನ್ನು ರೈಲ್ವೇ ಪೊಲೀಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರು ಸ್ಟ್ರೆಚರ್ಗಳಲ್ಲಿ ಎತ್ತಿಕೊಂಡು ಸಾಗಿಸಿದ್ದಾರೆ. ಸದ್ಯ ರೈಲ್ವೆ ನಿಲ್ದಾಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಿಎಂಸಿ ಹೇಳಿದೆ.