ಕೋಲ್ಕತ್ತಾ: ರವೀಂದ್ರ ಸಂಗೀತ ಕೇಳುವ ಬದಲಿಗೆ ಬಂಗಾಳದಲ್ಲಿಂದು ಬಾಂಬ್ಗಳ ಸದ್ದು ಕೇಳುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು,
Cooking Oil: ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಳಸುವುದರಿಂದ ಆಗುವ ತೊಂದರೆಗಳೇನು ಗೊತ್ತಾ..?
ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನ ಗೆದ್ದ ಬಳಿಕ ಮಮತಾ ದೀದಿ ಸಂತೋಷ ಪಡುತ್ತಿದ್ದರು. ಆದರೆ ನಾವು ಎರಡು ಸ್ಥಾನ ಪಡೆದಿದ್ದರೂ 370ನೇ ವಿಧಿಯನ್ನು ತೆಗೆದುಹಾಕುವ ಗುರಿ ಹೊಂದಿದ್ದೆವು ಎಂಬುದನ್ನು ಮರೆಯಬೇಡಿ. 2026ರಲ್ಲಿ ಬಂಗಾಳದಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹರಿಹಾಯ್ದರು.
ಅಕ್ರಮ ವಲಸೆ ಮಿತಿ ಮೀರಿದೆ:
ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸುವುದು ಅತ್ಯಗತ್ಯವಾಗಿದೆ. 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಯಲಾಗುವುದು.
ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಪ್ರಮುಖ ಪಾತ್ರವಹಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ಸಂಬಂಧ ಉತ್ತಮವಾಗಿರಲು ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.