ಬೆಂಗಳೂರು:- ಭ್ರಷ್ಠಾಚಾರದ ವಿರುದ್ಧ ಜಾಗೃತಿ ಮೂಡಿಸಲು “ಜಾಗೃತಿ ಅರಿವು ಸಪ್ತಾಹ-2024″ರ ಆಚರಣೆಯ ಅಂಗವಾಗಿ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನದಲ್ಲಿ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋದಿಸಿದರು.
ಈ ವೇಳೆ, ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ನೌಕರರು ಉಪಸ್ಥಿತರಿದ್ದರು.