ರಾಮನರಗ: ಸಿದ್ದರಾಮಯ್ಯ ಅವರ ಬಳಿಕ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಎಲ್ಲಾ ಅವಕಾಶ ಇದೆ. ಸಿ.ಪಿ ಯೋಗೇಶ್ವರ್ ಅವರನ್ನ ಗೆಲ್ಲಿಸಿದ್ರೆ ಡಿ.ಕೆ ಶಿವಕುಮಾರ್ಗೆ ಶಕ್ತಿ ಬರುತ್ತೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮನ್ವಯ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಕೆಶಿಗೆ ಇದೆ. ಯೋಗೇಶ್ವರ್ ಗೆಲ್ಲಿಸಿದ್ರೆ ಶಿವಕುಮಾರ್ಗೆ ಶಕ್ತಿ ಬರುತ್ತೆ. ಡಿ.ಕೆ ಸುರೇಶ್ ಸೋಲಿಸಲು ಕುಮಾರಸ್ವಾಮಿ ಬಾವನನ್ನ ತಂದು ನಿಲ್ಲಿಸಿದ್ರು. ಈಗ ಈ ಕ್ಷೇತ್ರವನ್ನ ಯೋಗೇಶ್ವರ್ಗೆ ಬಿಟ್ಟುಕೊಡಬಹುದಿತ್ತು. ಆದರೆ ಅವರ ಮನೆಯವರಿಗೆ ಬಿಟ್ಟು ಬೇರೆ ಯಾರಿಗೂ ಕುಮಾರಸ್ವಾಮಿ ಟಿಕೆಟ್ ಕೊಡಲ್ಲ. ಕುಮಾರಸ್ವಾಮಿ ಟೂರಿಂಗ್ ಟಾಕೀಸ್, ಎಲ್ಲೂ ನಿಲ್ಲಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಆಧಾರ್ ಕಾರ್ಡ್ʼನಲ್ಲಿ ಹೆಸರು, ವಿಳಾಸವನ್ನು ಎಷ್ಟು ಬಾರಿ ತಿದ್ದುಪಡಿ ಮಾಡಬಹುದು ಗೊತ್ತಾ..? ಇಲ್ಲಿದೆ ಮಾಹಿತಿ
ಡಿ.ಕೆ ಸುರೇಶ್ ಅವರ ಸೋಲನ್ನು ಮರೆಯೋಕೆ ಸಿಪಿವೈ ಗೆಲ್ಲಿಸಬೇಕು. ಅದಕ್ಕಾಗಿ ಎಲ್ಲರನ್ನೂ ಮನವೊಲಿಸಿ ಯೋಗೇಶ್ವರ್ ಪರ ಕೆಲಸ ಮಾಡಬೇಕು. ಯೋಗೇಶ್ವರ್ ಕ್ಷೇತ್ರಕ್ಕೆ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ. ಡಿಕೆಶಿ ಕ್ಷೇತ್ರದ ಜನರಿಗೆ ಟ್ರಾನ್ಸ್ಫಾರ್ಮರ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಎರಡು ಬಾರಿ ಗೆದ್ದು ಏನು ಕೊಟ್ಟಿದ್ದಾರೆ? ಕಾಂಗ್ರೆಸ್ ಸರ್ಕಾರ ಇನ್ನೂ 3 ವರ್ಷ ಇರುತ್ತೆ. ಸಿಪಿವೈ ಗೆದ್ದರೆ ಹೆಚ್ಚಿನ ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡ್ತಾರೆ. ಸ್ವಾಭಿಮಾನ ಉಳಿಸಿಕೊಳ್ಳಬೇಕು ಅಂದ್ರೆ ಯೋಗೇಶ್ವರ್ ಗೆಲ್ಲಿಸಬೇಕು ಎಂದು ಕರೆ ಕೊಟ್ಟಿದ್ದಾರೆ.