ವಿಜಯಪುರ:- ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್ ನೋಟಿಸ್ ಕೊಡಲಾಗಿತ್ತು ಎಂದು ಸಚಿವ MB ಪಾಟೀಲ್ ಕಿಡಿಕಾರಿದ್ದಾರೆ.
ನೀವು ನಿತ್ಯ ಲಕ್ಷ್ಮೀ ಪೂಜೆ ಮಾಡುತ್ತಿದ್ರೆ ಉಡುಪು ಹೀಗಿರಲಿ: ರಾಶಿ ಪ್ರಕಾರ ಯಾವ ಬಣ್ಣದ ಬಟ್ಟೆ ಧರಿಸಬೇಕು ಗೊತ್ತಾ!?
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ ವಕ್ಫ್ನಿಂದ ನೋಟಿಸ್ ನೀಡಲಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ದಾಖಲೆ ಸಮೇತ ಟಾಂಗ್ ಕೊಟ್ಟಿದ್ದಾರೆ.
2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು! ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ?” ಎಂದು ವಾಗ್ದಾಳಿ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸತ್ಯ ಶೋಧನಾ ಸಮಿತಿ (ಅತ್ತು ಕರೆದು ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯ ಶೋಧನಾ ಸಮಿತಿ) ಬಿಜೆಪಿ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ನಿಂದ ರೈತರಿಗೆ ನೋಟಿಸ್ ಕೊಟ್ಟಿರೋದಕ್ಕೆ ಉತ್ತರ ಕೊಡಲಿ” ಎಂದು ಸವಾಲು ಹಾಕಿದ್ದಾರೆ.