ಬೆಂಗಳೂರು:- ಜಮೀರ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.
ಫುಡ್ ಪ್ರಿಯರ ಗಮನಕ್ಕೆ: ಮೊಮೊಸ್ ತಿಂದ ಮಹಿಳೆ ಸಾವು, 20 ಜನ ಅಸ್ವಸ್ಥ!
ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ. ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.
ಈ ರೀತಿ ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ಈ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತಾ ಬರುತ್ತಿದೆ. ಅದೇ ನಿಟ್ಟಿನಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಇವತ್ತು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಆರೋಪಿಸಿದರು.
ನಿನ್ನೆ ಸಚಿವರು 120 ಜನ ರೈತರಿಗೆ ನೋಟಿಸ್ ಕೊಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ. ಅದಕ್ಕೆ ಬಿಜೆಪಿ ಹೊಣೆಗಾರನೇ? ಅದಕ್ಕೆ ಬಿಜೆಪಿ ಕಾರಣವೇ ಎಂದು ಕೇಳಿದರು. ಇದನ್ನು ಬಿಜೆಪಿ ಗಟ್ಟಿಯಾಗಿ ತೆಗೆದುಕೊಳ್ಳದೆ ಇದ್ದರೆ ರಾಜ್ಯ ಸರ್ಕಾರದ ಕ್ರಮದಿಂದ ನೂರಾರು ವರ್ಷಗಳಿಂದ ಉಳುಮೆ ಮಾಡುತ್ತಿದ್ದ ರೈತರು ಬೀದಿಗೆ ಬರಬೇಕಾಗುತ್ತಿತ್ತು ಎಂದು ವಿಜಯೇಂದ್ರ ವಿಶ್ಲೇಷಿಸಿದರು.