ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ನಾಯಕರಾಗುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್ಸಿಬಿ ಫೈನಲ್ ಪ್ರವೇಶಿಸದೇ 8 ವರ್ಷಗಳೇ ಕಳೆದಿವೆ.
IPL 2025: IPL ಮೆಗಾ ಹರಾಜಿನ ನಿಯಮದಲ್ಲಿ ಮಹತ್ವದ ಬದಲಾವಣೆ: ಏನದು ಗೊತ್ತಾ!?
ಆರ್ಸಿಬಿ ತಂಡದ ಪ್ರಸ್ತುತ ನಾಯಕ ಫಾಫ್ ಡುಪ್ಲೆಸಿಸ್ಗೆ ಈಗ 40 ವರ್ಷ. ಹೀಗಾಗಿ ಆರ್ಸಿಬಿ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ.
ಇತ್ತ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುತ್ತಿದ್ದಂತೆ ಮತ್ತೆ ನಾಯಕತ್ವದ ಚರ್ಚೆಗಳು ಶುರುವಾಗಿತ್ತು. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ನಾಯಕತ್ವದ ಹೊರೆಯ ಕಾರಣ ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರು. ಅಂದರೆ ಭಾರತ ತಂಡವನ್ನು ಹಾಗೂ ಆರ್ಸಿಬಿಯನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಲೀಗ್ ಕ್ರಿಕೆಟ್ನ ನಾಯಕತ್ವನ ಜವಾಬ್ದಾರಿಯಿಂದ ಕೆಳಗಿಳಿಯುತ್ತಿರುವುದಾಗಿ ಕೊಹ್ಲಿ ತಿಳಿಸಿದ್ದರು.
ಇದೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೂ ವಿದಾಯ ಹೇಳಿದ್ದಾರೆ. ಅತ್ತ ಟಿ20 ಮಾದರಿಗೆ ನಿವೃತ್ತಿ ಘೋಷಿಸಿರುವ ಕಾರಣ, ವಿರಾಟ್ ಕೊಹ್ಲಿ ಆರ್ಸಿಬಿ ಪರ ಸಂಪೂರ್ಣ ತೊಡಗಿಸಿಕೊಳ್ಳಬಹುದು.
ಹೀಗಾಗಿ ವಿರಾಟ್ ಕೊಹ್ಲಿ ಮತ್ತೆ ಆರ್ಸಿಬಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಐಪಿಎಲ್ 2025 ರಿಂದ ಕಿಂಗ್ ಕೊಹ್ಲಿ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕ್ರಿಕ್ಇನ್ಫೋ ಮೂಲಗಳು ತಿಳಿಸಿವೆ.
ಈಗಾಗಲೇ ವಿರಾಟ್ ಕೊಹ್ಲಿ ಆರ್ಸಿಬಿ ಫ್ರಾಂಚೈಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಇದೇ ವೇಳೆ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಕೂಡ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.