ಬಳ್ಳಾರಿ: ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿದ್ದ ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಸದ್ಯ ಈ ಸಂಬಂಧ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿಗೆ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ.
ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ. ಜೈಲಿನ ಕೊಠಡಿಯಲ್ಲಿ ಕೆಲ ಕಾಲ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಪತ್ನಿ ಜೊತೆ ದರ್ಶನ್ ಚರ್ಚಿಸಿದ್ದಾರೆ.
ರೈತರಿಗೆ ಕೇಂದ್ರದಿಂದ ಮತ್ತೊಂದು ಬಂಪರ್ ಯೋಜನೆ! ಶೇಕಡಾ 50 ರಷ್ಟು ಸಬ್ಸಡಿ ಘೋಷಿಸಿದ ಸರ್ಕಾರ
ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಇಂದಿಗೆ 63 ದಿನ. ಅಗಷ್ಟ 29 ರಂದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರು. ವಿಜಯಲಕ್ಷ್ಮಿ 10 ಬಾರಿ ಬಳ್ಳಾರಿ ಜೈಲಿಗೆ ಆಗಮಿಸಿ ದರ್ಶನ್ರನ್ನು ಭೇಟಿ ಮಾಡಿದ್ದರು.