ಬಳ್ಳಾರಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ಕೊನೆಗೂ 131 ದಿನಗಳ ಬಳಿಕ ಮಧ್ಯಂತರ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಬೆನ್ನಲ್ಲೇ ಫುಲ್ ಖುಷ್ ಆಗಿ ದರ್ಶನ್ ಅಭಿಮಾನಿಗಳು ಹಬ್ಬ ಶುರು ಹಚ್ಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿಯ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದುರ್ಗಮ್ಮ ದೇವಸ್ಥಾನಕ್ಕೆ ಕುಟುಂಬಸ್ಥರ ಜೊತೆ ವಿಜಯಲಕ್ಷ್ಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದರ್ಶನ್ ಅವರು ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೂ ಕರೆದೊಯ್ಯಲಾಗಿತ್ತು. ಅದರ ಬೆನ್ನಲ್ಲೇ ಈಗ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ದರ್ಶನ್ ಜಾಮೀನಿಗಾಗಿ ವಿಜಯಲಕ್ಷ್ಮಿ ಸಾಕಷ್ಟು ಪ್ರಯತ್ನ ಮಾಡಿದ್ದರು.
ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ!
ಆದರೆ ಅವರ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದೆ. ದರ್ಶನ್ಗೆ ಬೇಲ್ ಮಂಜೂರಾಗುತ್ತಿದ್ದಂತೆ ಸಂತಸದಲ್ಲಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬಂದಿದ್ದಾರೆ. ಕಾನೂನು ಹೋರಾಟದ ಜೊತೆ ವಿಜಯಲಕ್ಷ್ಮಿ ಅವರು ಸಾಕಷ್ಟು ಪ್ರಾರ್ಥನೆಗಳನ್ನು ಮಾಡಿಕೊಂಡಿದ್ದರು ಹಲವಾರು ದೇವಾಲಯಗಳಿಗೂ ಭೇಟಿ ನೀಡಿದ್ದರು.