ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ಮಕ್ಕಳು ಮಾಡಿಕೊಂಡ್ರೆ ಲಕ್ಷ ಲಕ್ಷ ದುಡ್ಡು ಕೊಡ್ತಾರಂತೆ. ಈ ಆಫರ್ ಬಗ್ಗೆ ತಿಳಿಯಲು ಈ ಸುದ್ದಿ ಪೂರ್ತಿ ಓದಿ.
Renukaswamy Father: ನಟ ದರ್ಶನ್ʼಗೆ ಜಾಮೀನು ಮಂಜೂರು: ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿದ್ದೇನು..?
ಎಸ್, ಕೊಡಗಿನಲ್ಲಿ ಕೊಡವ ಕುಟಂಬ ಉಳಿಸಲು ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂ.ದಿಂದ ಒಂದು ಲಕ್ಷ ರೂ. ದವರೆಗೆ ಬಹುಮಾನ ನೀಡಲಾಗುತ್ತಿದೆ.
ಇತ್ತೀಚಿನ ವರ್ಷಗಳಿಂದ ಕೊಡವರು ಸಾಂಸ್ಕೃತಿಕವಾಗಿ ಅದಃಪತನದತ್ತ ಸಾಗುತ್ತಿದ್ದಾರೆ ಅನ್ನೋ ಆತಂಕ ಜನರನ್ನ ಕಾಡುತ್ತಿದೆ. ಎಲ್ಲರೂ ತಮ್ಮ ಉದ್ಯೋಗಕ್ಕಾಗಿ ದೂರದ ಊರಿಗೆ ತೆರಳಿ ಅಲ್ಲೇ ಜೀವನ ಮಾಡುತ್ತಿದ್ದಾರೆ. ಜೊತೆಗೆ ಒಂದೇ ಮಗು ಸಾಕು ಅಂತ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ.
ಜಿಲ್ಲೆಯ ಹಬ್ಬ ಹರಿದಿನಗಳಿಗೆ ಬರುವ ಕೊಡವರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮುಂದೊಂದು ದಿನ ಕೊಡವರು ಬೆರಳೆಣಿಕೆ ಸಂಖ್ಯೆಗೆ ಇಳಿದರೂ ಅಚ್ಚರಿ ಇಲ್ಲ. ಹಾಗಾಗಿ ಜಿಲ್ಲೆಯ ವಿವಿಧ ಊರುಗಳಲ್ಲಿರುವ ಕೊಡವ ಸಮಾಜಗಳು ತಮ್ಮ ಜನಾಂಗಕ್ಕೆ ಹೆಚ್ಚು ಹೆಚ್ಚು ಮಕ್ಕಳನ್ನ ಮಾಡಿಕೊಳ್ಳುವಂತೆ ಆಫರ್ ನೀಡಿದೆ.
ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಯಾವ ಕೊಡವ ಕುಟುಂಬದ ಮೂರು ಮಕ್ಕಳಿಗೆ ಜನ್ಮ ನೀಡುವ ಪೋಷಕರಿಗೆ ಅವರಿಗೆ 50 ಸಾವಿರ ರೂ ಬಹುಮಾನ, 4 ಮಕ್ಕಳು ಮಾಡಿಕೊಳ್ಳುವ ಪೋಷಕರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. ಈ ಹಣವನ್ನ ಆ ಮಗುವಿನ ಹೆಸರಲ್ಲಿ ಬ್ಯಾಂಕ್ನಲ್ಲಿ ಡಿಪಾಸಿಟ್ ಇಟ್ಟು 18 ವರ್ಷ ತುಂಬಿದ ಬಳಿಕ ನೀಡುವುದಾಗಿ ಪ್ರಕಟಿಸಲಾಗಿದೆ.
ಇನ್ನು ಮಡಿಕೇರಿ ಕೊಡವ ಸಮಾಜ ಕೂಡ ಇಂತಹ ಒಂದು ಆಫರ್ ಅನ್ನು ಈಗಾಗಲೇ ಜಾರಿ ಮಾಡಿದೆ. ಈಗಾಗಲೇ ಮೂರು ಮಕ್ಕಳನ್ನು ಮಾಡಿಕೊಂಡಿರುವ ಒಂದು ಕುಟುಂಬ ಹಾಗೂ ನಾಲ್ಕು ಮಕ್ಕಳನ್ನು ಮಾಡಿಕೊಂಡಿರುವ ಒಂದು ಕುಟುಂಬವನ್ನು ಗುರುತಿಸಿ ಹಣ ನೀಡಿ ಹಾಗೂ ಸನ್ಮಾನ ಕೂಡ ಮಾಡಲಾಗಿದೆ.