ಬೆಂಗಳೂರು:- ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ!
ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು ಅವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಚಿವ ಶಿವರಾಜ್ ತಂಗಡಗಿ, ಕಡತ ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ನಾಡಿನ ಹಿರಿಯ ರಾಜಕೀಯ ನಾಯಕರು , ನಾಲ್ಕು ಸದನಗಳನ್ನು ಪ್ರತಿನಿಧಿಸಿ ಹಲವು ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿ ಸರ್ವ ಹುದ್ದೆಗಳಿಗೂ ಭೂಷಣರಾಗಿ ದೇಶಕ್ಕೆ ಅದರಲ್ಲೂ ಕನ್ನಡ ನಾಡಿಗೆ ಹೆಮ್ಮೆಯ ಕಳಶ ಪ್ರಯಾರಾಗಿರುವ ಶ್ರೀ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ನಾಮಾಂಕಿತ ವಾಗಿ ಐವತ್ತು ವಸಂತಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿರುವ ಶುಭ ಸಂದರ್ಭದಲ್ಲಿ ಅವರಿಗೆ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ರಾಜ್ಯದ ಜನರ ಪರವಾಗಿ ಗೌರವಿಸುವಂತೆ ಕೋರುತ್ತೇವೆ
ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಯಾಗಿ ರಾಜ್ಯ ಹಾಗೂ ರಾಷ್ಟ್ರದ ಸರ್ಕಾರಗಳಲ್ಲಿ ಮಂತ್ರಿಯಾಗಿ , ನಾಡಿನ ಮುಖ್ಯಮಂತ್ರಿ ಯಾಗಿ, ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅಲಂಕರಿಸಿದ ಎಸ್.ಎಂ. ಕೃಷ್ಣ ಅವರು ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿ ಆ ನಂತರ ಅಮೇರಿಕಾ ದೇಶದಲ್ಲಿ ವಿಧ್ಯಾಭ್ಯಾಸ ನಡೆಸಿ ಕಾನೂನು ಪದವಿ ಪಡೆದು ಅಪಾರ ವಿದ್ವತ್ ಪಡೆದು ತಮ್ಮ ಅಪಾರ ಜ್ಞಾನ ಭಂಡಾರದ ಮೂಲಕ ಭವಿಷ್ಯದ ಕನ್ನಡ ನಾಡಿನ ಅಭಿವೃದ್ಧಿಗೆ ಭದ್ರ ಭುನಾಧಿ ಕಲ್ಪಸಿ ಬೆಂಗಳೂರನ್ನು ಐಟಿ ಬಿಟಿ ರಾಜಧಾನಿ ಯಾಗಿಸಿ ನಾಡಿನ ಆರ್ಥಿಕ ಬೆಳವಣಿಗೆಗೆ ದಾರದೀಪವಾದವರು.
ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ಎಸ್ ಎಂ ಕೃಷ್ಣ ರವರು ಮೈಸೂರು ವಿಶ್ವವಿದ್ಯಾನಿಲಯದ ಕೀರ್ತಿ ಕಳಶರಾಗಿದ್ದರೆ. ಇಂದು ತಾವು ರಾಜ್ಯದ ಕನ್ನಡ ನಾಡಿನ ಸುವರ್ಣ ಸಂಭ್ರಮದ ಸಂಧರ್ಭದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಹ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ರವರು ನಾಡಿಗೆ ಸಲ್ಲಿಸಿದ ಕೀರ್ತಿಯನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವ ಮೂಲಕ ಅವರಿಗೆ ಕರ್ನಾಟಕಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಬೇಕಿದೆ ಎಂದಿದ್ದಾರೆ.