ಗದಗ:-ನಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿವೆ ಎಂದು HK ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರೈತರಿಗೆ ವಕ್ಫ್ ನಿಂದ ನೋಟಿಸ್ ಬಂದರೆ ಕ್ರಮ ಗ್ಯಾರಂಟಿ. ರೈತರ ಆಸ್ತಿ ವಕ್ಫ್ ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ. ಇದಕ್ಕೆ ಗದಗದಲ್ಲಿ ಆತಂಕ, ಟೀಕೆ ಟಿಪ್ಪಣಿಗೆ ಅವಕಾಶವಿಲ್ಲ. 689 ವಕ್ಫ್ ಆಸ್ತಿಗಳಿವೆ. ಯಾವುದೇ ರೈತರಿಗೆ ನೋಟಿಸ್ ಬಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಸರ್ಕಾರದ ಮೇಲೆ ಸುಳ್ಳು ಆಪಾದನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಉಪಚುನಾವಣೆಗಾಗಿ ಮಾಡಿರುವ ಗೊಂದಲ, ಸೃಷ್ಟಿ ಹೊರತು ಬೇರೇನಲ್ಲ ಎಂದರು.
ರೈತರ ಆಸ್ತಿ ಖಾತಾ ಬದಲಾವಣೆ ವಕ್ಫ್ ಆಗಿರುವ ಬಗ್ಗೆ ನಮ್ಮ ರೈತರಿಗೆ ಆತಂಕದ ಪರಿಸ್ಥಿತಿ ಇಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿ, ತಹಶಿಲ್ದಾರ್ ಸುದೀರ್ಘವಾಗಿ ಪರಿಶೀಲನೆ ಮಾಡಿದ್ದಾರೆ ಎಂದರು.