ರಾಮನಗರ: ಮೂರೂ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚನ್ನಪಟ್ಟಣದ ಚದುರಂಗ ಗೆಲ್ಲಲು ನಿಖಿಲ್ ಕುಮಾರಸ್ವಾಮಿ ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಇಂದು ಪ್ರಚಾರ ಮಾಡುತ್ತಾ ರಾಜಕೀಯ ಜೀವನದಲ್ಲಿ ನನಗೆ ಸಾಕಷ್ಟು ನೋವುಗಳಾಗಿದೆ ಎಂದು ಕಣ್ಣೀರು ಹಾಕಿದ್ದಾರೆ. ಹೌದು ತಾಲೂಕಿನ ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾವುಕರಾದರು.
ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ. ನಾನು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಬಾರಿ ಈ ಯುವಕನನ್ನು ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು.
HIV: 17 ವರ್ಷದ ಹುಡುಗಿಯ ಹಿಂದೆ ಬಿದ್ದ 20 ಮಂದಿಗೆ HIV ಪಾಸಿಟಿವ್! ಹೇಗೆ ಅಂತೀರಾ? ಈ ಸ್ಟೋರಿ ನೋಡಿ
ಕಳೆದ ಭಾರಿ ಲೋಕಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡಬೇಕು ಎಂಬುದು ಕಾರ್ಯಕರ್ತರ ಭಾವನೆಯಾಗಿತ್ತು. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಎಂದು ಎಲ್ಲರಿಗೂ ಗೊತ್ತು.
ಆಗ ನಾನು ದೇವೇಗೌಡರಿಗೆ ಸಾಹೇಬರಿಗೆ ಮನವಿ ಮಾಡಿದೆ. ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೆ, ರೈತ ಪರವಾಗಿ ಕಾಳಜಿ ಇಟ್ಟುಕೊಂಡು ಈ ಪಕ್ಷವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ, ಇಲ್ಲದೇ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು.