ಬೆಂಗಳೂರು:– ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಕ್ಷೇತ್ರ ಗೆಲ್ಲಲೇಬೇಕೆಂದು ಅಂದುಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಅದೊಂದು ಹೇಳಿಕೆ ಇದೀಗ ಪಕ್ಷಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ.
ವಿದೇಶಗಳಿಗೆ ಒಯ್ಯಲ್ಪಟ್ಟಿದ್ದ 640 ಪುರಾತನ ಕಲಾಕೃತಿ ಭಾರತಕ್ಕೆ ವಾಪಸ್!
ಶಕ್ತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಯಿಂದ ಮಹಿಳೆಯರು ಕೆರಳಿದ್ದಾರೆ. ಡಿಕೆ ಶಿವಕುಮಾರ್ ಅವರ ಹೇಳಿಕೆಯಿಂದ ಶಕ್ತಿ ಯೋಜನೆ ಮುಂದುವರೆಯುವ ಬಗ್ಗೆ ಮಹಿಳೆಯರಲ್ಲಿ ಅನುಮಾನ ಹುಟ್ಟಿದೆ. ಇದು ಕಾಂಗ್ರೆಸ್ಗೆ ಬರುವ ಮತಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ. ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಗೆ ಚುನಾವಣೆ ಯಲ್ಲಿ ಗ್ಯಾರಂಟಿ ಬಿಟ್ಟು ಬೇರೆ ಅಸ್ತ್ರವೇ ಇಲ್ಲದಂತಾಗಿತ್ತು. ಇದೀಗ ಕಾಂಗ್ರೆಸ್ ಅದೇ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದೆ. ನೆರೆ ರಾಜ್ಯದ ಚುನಾವಣೆ ಮೇಲೂ ಗ್ಯಾರಂಟಿ ಮರುಪರಿಶೀಲನೆ ಹೇಳಿಕೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.
ಚುನಾವಣೆ ಹೊತ್ತಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ಪಕ್ಷಕ್ಕೆ ಸಾಕಷ್ಟು ಹಾನಿಯಂತು ಉಂಟು ಮಾಡಲಿದೆ ಎಂದು ಹೇಳಲಾಗುತ್ತಿದೆ. ಈ ಹಾನಿಯನ್ನು ತಪ್ಪಿಸಲು ರಾಜ್ಯ ಕಾಂಗ್ರೆಸ್ ನಾಯಕರು ಮೂರು ಕ್ಷೇತ್ರದಲ್ಲಿ ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ. ಆದರೆ ಎಷ್ಟರ ಮಟ್ಟಿಗೆ ವರ್ಕ್ಔಟ್ ಆಗುತ್ತೆ ಕಾದು ನೋಡಬೇಕಿದೆ.