ಚಿಕ್ಕಮಗಳೂರು:- ಮೋದಿ ಅವರನ್ನು ಸಿದ್ದರಾಮಯ್ಯ ಟೀಕಿಸಿದ್ರೆ ಸೂರ್ಯನಿಗೆ ಉಗಿದಂತೆ ಎಂದು CT ರವಿ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೇ ಪುನೀತ್ ಸಾವು!
ಈ ಸಂಬಂಧ ಮಾತನಾಡಿದ ಅವರು,ವಕ್ಫ್ ನೋಟಿಫಿಕೇಶನ್ ಅನ್ನೋದೇ ಕಾನೂನು ಬಾಹಿರ. ಜಿಲ್ಲೆಯ ಡಿ.ಆರ್ ಪೊಲೀಸ್ ಗ್ರೌಂಡ್, ರತ್ನಗಿರಿಯ ಜಾಗವನ್ನು ವಕ್ಫ್ ಆಸ್ತಿ ಎಂದು ನೋಟಿಫಿಕೇಶನ್ ಹೊರಡಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಹಳ್ಳಿ-ಹಳ್ಳಿಗೆ ಹೋಗಿ ವಕ್ಫ್ ಅದಾಲತ್ ಮಾಡಿದ್ದು ಯಾರು? ಬಿಜೆಪಿಯವರೋ ಅಥವಾ ಸಚಿವ ಜಮೀರ್ ಅವರೋ? ಸಿದ್ದರಾಮಯ್ಯ ಈಗ ಸುಳ್ಳು ರಾಮಯ್ಯ ಆಗಿದ್ದಾರೆ. ಜಮೀರ್ ಅವರು ಸಿಎಂ ಸೂಚನೆ ಮೇರೆಗೆ ನಾನು ವಕ್ಫ್ ಅದಾಲತ್ ಮಾಡ್ತಿದ್ದೇನೆ ಎಂದಿದ್ದಾರೆ. ಇವರು ಸುಮ್ಮನೆ ಬರ್ತಾರೆ, ಹೋಗ್ತಾರೆ ಎಂದು ಭಾವಿಸಬೇಡಿ ಎಂದು ಜಮೀರ್ ಮಾತನಾಡಿದ್ದ ವೀಡಿಯೋ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ, ಗ್ಯಾರಂಟಿ ವಿಚಾರವಾಗಿ ಮೋದಿ ಟ್ವೀಟ್ಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯರ ವಿರುದ್ಧ ಸಹ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರೇ ನೀವು ಮೋದಿಯವರನ್ನ ಟೀಕೆ ಮಾಡಿದ್ರೆ ಸೂರ್ಯನಿಗೆ ಉಗಿದಂತೆ. ಅದು ನಿಮ್ಮ ಮುಖಕ್ಕೆ ಮೆತ್ತಿಕೊಳ್ಳುತ್ತದೆ. ಅದನ್ನು ನೀವೇ ತೊಳೆದುಕೊಳ್ಳಬೇಕು ಎಂದು ಲೇವಡಿ ಮಾಡಿದ್ದಾರೆ.