ವಿಜಯಪುರ:-ದಾನಿಗಳಿಂದ ಬಂದಿರುವ ಆಸ್ತಿ ವಕ್ಫ್ ಆಸ್ತಿ ಆಗಿದ್ದು, ಇದು ಯಾವ ಸರ್ಕಾರವೂ ಕೊಟ್ಟಿಲ್ಲ ಎಂದು ಸಚಿವ ಜಮೀರ್ ಹೇಳಿದ್ದಾರೆ.
ಮೋದಿ ಅವರನ್ನು ಸಿದ್ದರಾಮಯ್ಯ ಟೀಕಿಸಿದ್ರೆ ಸೂರ್ಯನಿಗೆ ಉಗಿದಂತೆ: CT ರವಿ!
ಈ ಸಂಬಂಧ ಮಾತನಾಡಿದ ಅವರು, ವಕ್ಫ್ ಆಸ್ತಿ ಅಲ್ಲಾನ ಆಸ್ತಿ, ಇದು ದಾನಿಗಳಿಂದ ಬಂದಿದ್ದು ಎಂದರು. ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಅಂತೀವಿ. ಅದು ದಾನಿಗಳು ದಾನ ಮಾಡಿರುವ ಆಸ್ತಿ, ಯಾರೂ ಸರ್ಕಾರದಿಂದ ಕೊಟ್ಟಿರುವುದಲ್ಲ. ಬಿಜೆಪಿಯವರಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಇಷ್ಟು ದಿನ ಮುಡಾದ ಬಗ್ಗೆ ಮಾತನಾಡಿದರು.
ಅದರಲ್ಲಿ ಏನೂ ಎಲ್ಲ ಎಂದು ಗೊತ್ತಾದ ಮೇಲೆ ಈಗ ವಕ್ಫ್ನ್ನು ಹಿಡಿದುಕೊಂಡಿದ್ದಾರೆ. ಕರ್ನಾಟಕದಲ್ಲಿ ಮೂರು ಕಡೆ ಉಪಚುನಾವಣೆ ನಡೆಯಲಿದೆ. ಜೊತೆಗೆ ಮಹಾರಾಷ್ಟ್ರ ಚುನಾವಣೆ ಇದೆ. ಆದ್ದರಿಂದ ರಾಜಕೀಯ ಗಿಮಿಕ್ಗೋಸ್ಕರ ಸುಮ್ಮನೇ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.