ಮಂಡ್ಯ: ಒಂದೆಡೆ ರೈತರು ತಮ್ಮ ಜಮೀನುಗಳನ್ನು ಕಾಪಾಡಿಕೊಳ್ಳಲು ಪರದಾಡುತ್ತಿದ್ದರೆ, ಮತ್ತೊಂದೆಡೆ ರೈತರ ಭೂಮಿಯನ್ನ ವಕ್ಫ್ ಬೋರ್ಡ್ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ.. ಹೌದು ರೈತರ ಜಮೀನನ್ನು ವಕ್ಫ್ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಪಹಣಿಗಳಲ್ಲಿದ್ದ ವಕ್ಫ್ ಹೆಸರನ್ನು ಡಿಲೀಟ್ ಮಾಡಲಾಗಿದೆ.
Marigold: ಈ ವಿಧಾನ ಅನುಸರಿಸಿ ಚೆಂಡು ಹೂ ಬೆಳೆದರೆ 1 ಎಕರೆಯಲ್ಲಿ ಲಕ್ಷಗಟ್ಟಲೆ ಹಣ ಗಳಿಸಬಹುದು!
ಇದರ ಬೆನ್ನಲ್ಲೇ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಸರ್ವೆ ನಂ.215ರ 30 ಗುಂಟೆ ಜಾಗದಲ್ಲಿ ಸರ್ಕಾರಿ ಶಾಲೆ ಇದೆ. ಈ ಶಾಲೆಯ ಜಾಗದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ನಮೂದಾಗಿದೆ. ಸರ್ಕಾರಿ ಶಾಲೆ ಜಾಗ ಕಬಳಿಕೆಗೆ ಮುಂದಾದ ವಕ್ಫ್ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಸರ್ಕಾರದ ವಿರುದ್ಧ ಕಿಡಿ ಕಾರಿ ರಾಜ್ಯದ ವಕ್ಫ್ ಮಂಡಳಿ ವಜಾಗೊಳಿಸಲು ಆಗ್ರಹಿಸಿದ್ದಾರೆ.
ಚಿಕ್ಕಮ ದೇವಿ ದೇವಸ್ಥಾನದ ಮೇಲೂ ವಕ್ಫ್ ಕಣ್ಣು:
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಎಂಬ ಗ್ರಾಮದಲ್ಲಿ 6 ಗುಂಟೆ ವ್ಯಾಪ್ತಿಯಲ್ಲಿ ಚಿಕ್ಕಮ್ಮ ದೇವಿ ಎಂಬ ದೇವಸ್ಥಾನ ಇದೆ. ಹಲವು ವರ್ಷಗಳ ಹಿಂದೆಯೇ ಈ ದೇವಸ್ಥಾನ ಕಟ್ಟಿಸಿ ಈ ಗ್ರಾಮದ ಜನರು ಚಿಕ್ಕಮ್ಮ ದೇವಿಯನ್ನು ಪೂಜಿಸುತ್ತಾ ಬರುತ್ತಿದ್ದಾರೆ. 2023 ಜುಲೈ 17ರ ವರೆಗೆ ಈ ದೇವಸ್ಥಾನದ 6 ಗುಂಟೆ ಜಾಗದ ಆರ್ಟಿಸಿಯಲ್ಲಿ ಬಂಜರು ಎಂದು ಉಲ್ಲೇಖವಾಗಿದೆ, ಅಂದರೆ ಇದು ಸರ್ಕಾರಿ ಜಮೀನು ಎಂದರ್ಥ. ಇನ್ನೊಂದೆಡೆ ಸಾಗುವಳಿ ಕಾಲಂನಲ್ಲಿ ಚಿಕ್ಕಮ್ಮನ ದೇವಸ್ಥಾನ ಎಂದು ಹೆಸರಿತ್ತು. ಆದರೆ ಇದೀಗ ಈ ದೇವಸ್ಥಾನ ಹಾಗೂ ಜಾಗವನ್ನು ವಕ್ಫ್ ಆಸ್ತಿ ಎಂದು ಮಾಡಲಾಗಿದೆ.