ಬೆಂಗಳೂರು: ಶಕ್ತಿ ಯೋಜನೆ ಬಹಳ ದಿನ ನಡೆಯುವುದಿಲ್ಲ ಎಂದು ಹೇಳಿರುವ ಆರ್ ಅಶೋಕ್ ಹೇಳಿಕೆಗೆ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಬಹಿರಂಗ ಚರ್ಚೆಗೂ ಆಹ್ವಾನಿಸಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ.
ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಏಕೆಂದರೆ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ನಾವು ನಿಮ್ಮಗಳ ರೀತಿ ಗಾಳಿಯಲ್ಲಿ ಗುಂಡು ಹಾರಿಸೊಲ್ಲ, ಅಂಕಿಅಂಶಗಳೇ ನಮ್ಮ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂದರು. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಯಾವ ಸಾಧನೆಗಳನ್ನು ಮಾಡಿದ್ದೀರ ಎಂಬ ಪಟ್ಟಿ ಕೊಟ್ಟರೆ ನಾವು ನಿಮ್ಮೊಡನೆ ನೇರಾನೇರ ಚರ್ಚಿಸಲು ಬಯಸುತ್ತೇವೆ ಎಂದು ಆಹ್ವಾನ ನೀಡಿದ್ದಾರೆ.
Mutual Fund: ಜಸ್ಟ್ 1 ಲಕ್ಷ ಹೂಡಿಕೆ ಮಾಡಿದ್ರೆ ಸಾಕು 1 ಕೋಟಿ ರೂ. ನಿಮ್ಮದಾಗುತ್ತೆ! ಹೇಗೆ ಗೊತ್ತಾ..?
ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಅಧಿಕಾರಾವಧಿಯಲ್ಲಿ ಎಂಬ ಕಟುವಾದ ಸತ್ಯ ನಿಮಗೆ ತಿಳಿದಿದ್ದರೂ ಸಹ ಜಾಣ ಕುರುಡು ತೋರುವ ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಮ್ಮ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ ಎಂದರು.