ಬೆಳಗಾವಿ: 2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಸಹ ಒಂದಾಗಿದೆ. ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ರಾಜ್ಯದ ಮನೆ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ.
ಇನ್ನೂ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಈ ಹಣದಿಂದ ಸಾಕಷ್ಟು ಪ್ರಯೋಜನವಾಗಿದೆ. ಈ ಹಿಂದೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿ ಮಾಡಿರೋದು, ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ್ದು, ಸೊಸೆಗೆ ಅತ್ತೆಯೊಬ್ಬರು ಫ್ಯಾನ್ಸಿ ಅಂಗಡಿ ಹಾಕಿಕೊಟ್ಟಿರೋದು ಸೇರಿದಂತೆ ಇನ್ನಿತರ ಮಾದರಿ ಕಾರ್ಯಗಳನ್ನು ಮಾಡಿರುವುದು ನೀವು ಕೇಳಿರುತ್ತೀರಿ,
ರಾತ್ರಿ ಮಲಗುವ ಮುನ್ನ ಜಾಯಿಕಾಯಿ-ಕೇಸರಿ ಮಿಶ್ರಿತ ಹಾಲು ಕುಡಿಯಿರಿ: ನಿಮ್ಮ ದೇಹದಲ್ಲಾಗುವ ಮ್ಯಾಜಿಕ್ ನೋಡಿ!
ಇದೀಗಮಹಿಳೆಯೊಬ್ಬರು ಖಾರ ಪುಡಿ ಮಾಡುವ ಯಂತ್ರ ಖರಿದೀಸಿದ್ದಾರೆ. ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮದ ತಾಯವ್ವ ಲಕಮೋಜಿ ಖದೀಸಿದ ಯಂತ್ರವನ್ನು, ಆಕೆಯ ಕಿರು ಉದ್ದಿಮೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟನೆ ಮಾಡಿದ್ದಾರೆ. ಗೃಹ ಲಕ್ಷ್ಮಿ ಹಣದಲ್ಲಿ ಅನೇಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಸಚಿವೆ ಸಂತಸ ವ್ಯಕ್ತಪಡಿಸಿದ್ದಾರೆ.