ಬೆಂಗಳೂರು:- ವಿಜಯಪುರ ಸೇರಿ ರಾಜ್ಯದ ಅನೇಕ ಜಿಲ್ಲೆಗಳ ರೈತರಿಗೆ ವಕ್ಫ್ ಬೋರ್ಡ್ ಕೊಟ್ಟಿರುವ ನೋಟಿಸ್ ವಿರುದ್ಧ ವಿಪಕ್ಷ ಬಿಜೆಪಿ ಕಿರಿಕಾರಿದ್ದು, ಇಂದು ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ.
Gruhalakshmi Money: ಗೃಹ ಲಕ್ಷ್ಮಿ ಹಣದಿಂದ ಖಾರ ಪುಡಿ ಮಾಡೋ ಯಂತ್ರ ಖರೀದಿಸಿದ ಮಹಿಳೆ!
ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇನ್ನೂ ಸರ್ಕಾರದ ಸೂಚನೆ ನಂತರವೂ ಬಿಜೆಪಿ ಪ್ರತಿಭಟನೆಗೆ ಮುಂದಾಗಿರೋದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆ. ರೈತರ ಹಿತಾಸಕ್ತಿ ರಕ್ಷಣೆಯ ಸದುದ್ದೇಶ ಇಲ್ಲ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ರಾಜ್ಯದ ಜನರನ್ನು ಸಿಎಂ ಕೋರಿದ್ದಾರೆ.