ಬೆಂಗಳೂರು:- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲಾಗಿದೆ.
Mangaluru Water Metro: ಕೇರಳದ ಕೊಚ್ಚಿ ಮಾದರಿ ಮಂಗಳೂರಿಗೂ ಬರ್ತಿದೆ ವಾಟರ್ ಮೆಟ್ರೋ..!
ಪ್ರಕರಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ. ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಆಗಿದ್ದಾರೆ. ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ.
ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.