ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅನುಮಾನ ವ್ಯಕ್ತಪಡಿಸಿದ್ದಾರೆ.
ಮುಂದಿನ ವರ್ಷದಿಂದ ಟೆಸ್ಟ್ ಸರಣಿಗೆ ರೋಹಿತ್ ಅಲಭ್ಯ!? ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹೇಳಿದಿಷ್ಟು!
ಮುಡಾ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸುವ ಮೊದಲು ತನಿಖೆ ನಡೆಯುವ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಈಗ ಲೋಕಾಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದರೂ ಸೂಕ್ತ ತನಿಖೆ ನಡೆಯುವ ಬಗ್ಗೆ ಅನುಮಾನಿಸುತ್ತಿದ್ದಾರೆ.
ಕಾನೂನಿನ ಮುಂದೆ ಎಲ್ಲರೂ ಒಂದೇ ಕಾರಣಕ್ಕೆ ಸಿಎಂರನ್ನು ವಿಚಾರಣೆಗೆ ಕರೆಸಲಾಗುತ್ತಿದೆ, ಆದರೆ ವಿಚಾರಣೆ ಸರಿಯಾದ ನಿಟ್ಟಿನಲ್ಲಿ ಸಾಗುತ್ತದೆಯೇ ಎಂಬ ಸಂಶಯ ಕಾಡುತ್ತಿದೆ ಎಂದು ಕೃಷ್ಣ ಹೇಳಿದರು.