ಬೆಂಗಳೂರು:- ಕೆಲಸ ಇಲ್ಲದೇ ಖಾಲಿ ಕೂತಿರುವ ಯುವಕ, ಯುವತಿಯರಿಗೆ ಬಂಪರ್ ಅವಕಾಶ ಬಂದಿದೆ. ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಟ್ರೈನಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ! ಸ್ಥಳದಲ್ಲಿ ಡೆತ್ ನೋಟ್ ಪತ್ತೆ
ಟ್ರೈನಿ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಅಧಿಸೂಚನೆಯಲ್ಲಿ 23 ಟ್ರೈನಿ ಇಂಜಿನಿಯರ್ ಮತ್ತು 54 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಒಳಗೊಂಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಬಿಇಎಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನವೆಂಬರ್ 9 ರೊಳಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
* ಟ್ರೈನಿ ಇಂಜಿನಿಯರ್ – 23 ಹುದ್ದೆಗಳು
ಪ್ರಾಜೆಕ್ಟ್ ಎಂಜಿನಿಯರ್ – 54 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ
* ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 2024 ರ ಅಧಿಸೂಚನೆ ಪ್ರಕಾರ ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ, ಬಿ.ಇ ಹಾಗೂ ಬಿ.ಟೆಕ್ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಟ್ರೈನಿ ಇಂಜಿನಿಯರ್ – ಐ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ ಮತ್ತು ಪ್ರಾಜೆಕ್ಟ್ ಇಂಜಿನಿಯರ್- ಐ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು.
ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯಿದೆ.
ಅರ್ಜಿ ಶುಲ್ಕಗಳು
* ಎಸ್ಸಿ/ಎಸ್ಟಿ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್
ಲ