ಬೆಂಗಳೂರು:- ಬೆನ್ಜ್ ಕಾರು ಡಿಕ್ಕಿಯಾಗಿ ಫ್ಯಾಷನ್ ಡಿಸೈನರ್ ಸಂಧ್ಯಾ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ನಗರ ಕಮಿಷನರ್ ದಯಾನಂದ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Salman Khan: ದೇವಾಲಯಕ್ಕೆ ಬಂದು ಕ್ಷಮೆ ಕೇಳು, ಇಲ್ಲಾಂದ್ರೆ 5 ಕೋಟಿ ರೂ. ಕೊಡು: ಸಲ್ಮಾನ್ ಖಾನ್ʼಗೆ ಮತ್ತೆ ಬೆದರಿಕೆ
ಈ ಸಂಬಂಧ ಮಾತನಾಡಿದ ಅವರು,ಕೆಂಗೇರಿ ಬಸ್ ನಿಲ್ದಾಣದ ಮುಂದೆ ಬೆಂಜ್ ಕಾರು ಡಿಕ್ಕಿಯಾಗಿ 30 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಕೇಸ್ ದಾಖಲು ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಡ್ರಂಕ್ & ಡ್ರೈವ್ ಮತ್ತು ರಕ್ತ ಪರೀಕ್ಷೆ ಮಾಡಿಸಲಾಗಿದೆ. ‘ಉದ್ದೇಶಪೂರ್ವಕವಲ್ಲದ ಕೊಲೆ’ ಎಂದು ಕೇಸ್ ದಾಖಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕಾನೂನಾತ್ಮಕವಾಗಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದರು.
ಘಟನೆ ಹಿನ್ನೆಲೆ:-
ಇನ್ನೂ ನಗರದ ಕೆಂಗೇರಿ ಬಸ್ ನಿಲ್ದಾಣದ ಬಳಿ ದುರ್ಘಟನೆ ಸಂಭವಿಸಿದೆ. ಶನಿವಾರ ಕೆಲಸ ಮುಗಿಸಿ ರಾತ್ರಿ 7 ಗಂಟೆ ಸುಮಾರಿಗೆ ಕೆಂಗೇರಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದರು.
ಈ ವೇಳೆ ಮದ್ಯದ ಮತ್ತಿನಲ್ಲಿ ಬೆಂಜ್ ಕಾರು ಚಲಾಯಿಸಿಕೊಂಡು ಬಂದ ಯುವಕ, ಸಂಧ್ಯಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರು ಸಂಧ್ಯಾ ಅವರನ್ನು 5 ಮೀಟರ್ ಉಜ್ಜಿಕೊಂಡು ಹೋಗಿದೆ. ಅಪಘಾತದ ರಭಸಕ್ಕೆ ಸಂಧ್ಯಾ ತಲೆಗೆ ತೀವ್ರ ಪೆಟ್ಟಾಗಿ, ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ಬಳಿಕ ಯುವಕ ಪರಾರಿಯಾಗಲು ಯತ್ನಿಸಿದ್ದಾನೆ. ಆಗ, ಸ್ಥಳೀಯರು ಯುವಕನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.