ಬೆಂಗಳೂರು:- ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಶಾಸಕರು ಸಿಡಿದೆದ್ದಿದ್ದು, ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಡಿವೋರ್ಸ್ ಬಳಿಕ 2ನೇ ಮದುವೆ ತಯಾರಿಯಲ್ಲಿ ಶಿಖರ್ ಧವನ್!?: ಇದು ನಿಜಾನಾ!?
ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇದೀಗ ಕಾಂಗ್ರೆಸ್ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಈಗಾಗಲೇ ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್ರನ್ನೇ ಗುರಿಯಾಗಿಸಿಕೊಂಡಿದ್ದಾರೆ. ಇತ್ತ ಆಡಳಿತ ಪಕ್ಷದ ಒಳಗೂ ಜಮೀರ್ ವಿರುದ್ಧ ಮೇಲ್ವರ್ಗದ ಶಾಸಕರು, ಸಚಿವರಿಂಧ ಬೇಸರ ವ್ಯಕ್ತವಾಗಿದೆ
ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈಗಿನ ಬೆಳವಣಿಗೆಗಳಿಗೆಲ್ಲ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸದ್ಯ ಉಪಚುನಾವಣೆಗೆ ಸಜ್ಜಾಗಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ತಾನೇ ಮುಂದೆ ನಿಂತು ಓಡಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜಮೀರ್ ವಿರುದ್ಧ ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ ಕೈ ಶಾಸಕರು, ಜಮೀರ್ ಹೇಳಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.