ನವದೆಹಲಿ: ಖಾಸಗಿ ಆಸ್ತಿಗಳ ಮೇಲೆ ಸರ್ಕಾರಿ ಹಕ್ಕಿನ ವ್ಯಾಪ್ತಿ ಎಲ್ಲಿಯವರೆಗೆ ಇದೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಎಲ್ಲಾ ಖಾಸಗಿ ಹಕ್ಕುಗಳ ಮೇಲೆ ರಾಜ್ಯ ಸರ್ಕಾರಗಳ ಮೇಲೆ ಹಕ್ಕುಗಳು ಇರುವುದಿಲ್ಲ ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ, ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಬಹುದು ಎಂದು ನ್ಯಾ. ಕೃಷ್ಣಯ್ಯರ್ ನೀಡಿದ್ದ ತೀರ್ಪನ್ನು 8:1 ಬಹುಮತದೊಂದಿಗೆ ವಜಾ ಮಾಡಿದೆ.
ಸಂವಿಧಾನದ ಆರ್ಟಿಕಲ್ 39(ಬಿ)ಪ್ರಕಾರ ಖಾಸಗಿಯವರ ಮಾಲೀಕತ್ವದ ಎಲ್ಲಾ ಸಂಪನ್ಮೂಲಗಳನ್ನು ವಶಕ್ಕೆ ಪಡೆಯುವ ಹಕ್ಕು ರಾಜ್ಯ ಸರ್ಕಾರಗಳಿಗೆ ಇರಲ್ಲ ಎಂದು ಸಿಜೆಐ ಚಂದ್ರಚೂಡ್ ನೇತೃತ್ವದ 9 ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನಿಕ ಪೀಠ ಸ್ಪಷ್ಟವಾಗಿ ತಿಳಿಸಿದೆ.
Bank Recruitment: ಯೂನಿಯನ್ ಬ್ಯಾಂಕ್ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ.! ಡಿಗ್ರಿ ಪಾಸಾದವರಿಗೆ ₹ 85,000 ಸಂಬಳ
ಕೆಲವೇ ಪ್ರಕರಣಗಳಲ್ಲಿ ಇದಕ್ಕೆ ವಿನಾಯ್ತಿ ಇರಲಿದೆ ಎಂದು ಸಾಂವಿಧಾನಿಕ ಪೀಠ ತಿಳಿಸಿದೆ. ಈ ವಿಚಾರವನ್ನು 1950ರ ಭಾರತವನ್ನು ದೃಷ್ಟಿಯಲ್ಲಿಟ್ಟುಕೊಂಡು ನೋಡಲಾಗದು. ಅಂದು ರಾಷ್ಟ್ರೀಕರಣ ನಡೆದಿತ್ತು. ಆದರೆ ಇಂದು ಹೂಡಿಕೆ ವಾಪಸಾತಿ ನಡೆಯುತ್ತಿದೆ. ಖಾಸಗಿ ಹೂಡಿಕೆ ಇದೆ. ಇದು ಪರಿವರ್ತನೆ. ಹೀಗಾಗಿ ಇಂದಿನ ಸ್ಥಿತಿಗೆ ಅನುಗುಣವಾಗಿ ಮತ್ತು ಭವಿಷ್ಯವನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಈ ತೀರ್ಪು ನೀಡಿದ್ದೇವೆ ಎಂದು ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ.
ಈ ತೀರ್ಪಿನೊಂದಿಗೆ, ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬಹುದು ಎಂದು ಹೇಳಿದ್ದ ನ್ಯಾ. ಕೃಷ್ಣ ಅಯ್ಯರ್ ಅವರ 1978 ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು. ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ತೀರ್ಪು ಖಾಸಗಿ ವ್ಯಕ್ತಿಗಳ ಎಲ್ಲಾ ಆಸ್ತಿಗಳನ್ನು ಸಮುದಾಯದ ಆಸ್ತಿ ಎಂದು ಕರೆಯಬಹುದು ಎಂದು ಹೇಳಿತ್ತು.