ಹಾವೇರಿ: ಸಿಎಂ ಸಿದ್ದರಾಮಯ್ಯ ಉಪಚುನಾವಣೆ ಅಖಾಡದಲ್ಲಿ ಅಬ್ಬರಿಸುತ್ತಿರುವಾಗಲೇ, ಅವರಿಗೆ ಮುಡಾ ಹಗರಣ ಮಗ್ಗಲ ಮುಳ್ಳಾಗಿ ಕಾಡುತ್ತಿದೆ. 40 ವರ್ಷಗಳಿಂದ ನಾನು ಮಂತ್ರಿಯಾಗಿದ್ದೀನಿ. ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ಎಂದು ಸಿಎಂ ಸಿದ್ದರಾಮಯ್ಯ ತನ್ನ ಮೇಲಿರುವ ಮುಡಾ ಕೇಸ್ ಬಗ್ಗೆ ಮಾತನಾಡಿದ್ದಾರೆ.
40 ವರ್ಷಗಳಿಂದ ನಾನು ಮಂತ್ರಿಯಾಗಿದ್ದೀನಿ. ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದರು.
Bank Recruitment: ಯೂನಿಯನ್ ಬ್ಯಾಂಕ್ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ.! ಡಿಗ್ರಿ ಪಾಸಾದವರಿಗೆ ₹ 85,000 ಸಂಬಳ
ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ ಎಂದು ಹೇಳಿದರು.