ಕೆ.ಆರ್.ಪುರ: ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಡಿಸೆಂಬರ್ 28 ಮತ್ತು 29 ರಂದು ಬೆಂಗಳೂರಿನ ಬಾಗಲೂರು ವಿಜೆ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರು ತಿಳಿಸಿದರು. ನಾಗವಾರದ ಎಸ್.ವಿ.ಎನ್, ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದ್ದು, ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರಮೇಳ, ಕರಕುಶಲ ವಸ್ತು ಪ್ರದರ್ಶನ, ಆಕರ್ಷಕ ಸಾಂಸ್ಕೃತಿಕ ವೈಭವ ರಾಜ್ಯ ಮಟ್ಟದಲ್ಲಿ 10 ಜನರಿಗೆ ಜೀವಮಾನ ಶ್ರೇಷ್ಠ ಸಾಧನ ಪ್ರಶಸ್ತಿ, ರಾಜ್ಯದ 37ಜನರಿಗೆ ಹೆಚ್.ಎನ್.ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದರು.
ಮಹಿಳೆಯರೇ “ಸೆಕ್ಸ್” ವೇಳೆ ನಿಮಗೆ ಸಿಕ್ಕಾಪಟ್ಟೆ ನೋವಾಗುತ್ತಾ..? ಕಡಿಮೆ ಮಾಡೋ ಟಿಪ್ಸ್ ಇಲ್ಲಿದೆ ನೋಡಿ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ಹಾಗೂ ಬೆಂಗಳೂರು ಶೈಕ್ಷಣಿಕ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ,ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಹಯೋಗದೊಂದಿಗೆ ಸಮ್ಮೇಳನ ನಡೆಯಲಿದೆ ಎಂದು ಹೇಳಿದರು.
ಈಗಾಗಲೇ ಶಿವಮೊಗ್ಗ, ತುಮಕೂರು, ಲಿಂಗಸಗೂರು ನಲ್ಲಿ ಯಶಸ್ವಿಯಾಗಿ ಸಮ್ಮೇಳನಗಳನ್ನು ನಡೆಸಿದ್ದು ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಐತಿಹಾಸಿಕವಾಗಿ ನಡೆಸಲು ಸಕಲ ಸಿದ್ಧತೆಯನ್ನು ನಡೆಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಉದ್ಘಾಟನೆ ಮಾಡಲಿದ್ದು ಜೊತೆಗೆ ಮಂತ್ರಿಗಳು, ಕೇಂದ್ರ ಮಂತ್ರಿಗಳು, ವಿಜ್ಞಾನಿಗಳು ಅನೇಕ ಚಿಂತಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಮ್ಮೇಳನವನ್ನು ರಾಜ್ಯದ .30 ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು ವಿಜ್ಞಾನ ವಸ್ತು ಪ್ರದರ್ಶನ, ವೈವಿಧ್ಯಮಯವಾದ ಆಹಾರಮೇಳ, ಕರಕುಶಲ ವಸ್ತು ಪ್ರದರ್ಶನ ಮೊದಲಾದ ವಸ್ತು ಪ್ರದರ್ಶನಗಳ ಆಯೋಜಿಸಿದೆ ಎರಡು ದಿನ ನಡೆಯುವ ಸಮ್ಮೇಳನದಲ್ಲಿ ಬುದ್ಧನ ಬೆಳಕು ಹಾಗೂ ಕೆಂಪೇಗೌಡ ನಾಟಕ ಪ್ರದರ್ಶನವಾಗಲಿವೆ. ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳನ್ನು ಆಯೋಜಿಸಿದೆ ನಾಲ್ಕು ವಿಚಾರಗೋಷ್ಠಿಗಳು ನಡೆಯಲಿವೆ ವಿಶೇಷವಾಗಿ ಪರಿಷತ್ತಿನ ಮಹಾ ಅಧಿವೇಶನ ಆಯೋಜಿಸಿದೆ ಎಂದು ನುಡಿದರು.
ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ಮಹಿಳಾ ಕೇಂದ್ರಿತವಾಗಿ ವಿಭಿನ್ನವಾಗಿ ಆಯೋಜಿಸಲಾಗುತ್ತಿದ್ದು ಈ ಸಮ್ಮೇಳನಕ್ಕೆ ಹೊರ ಜಿಲ್ಲೆಯಿಂದ ಬರುವವರಿಗೆ ವಸತಿ ವ್ಯವಸ್ಥೆಯನ್ನು ಮಾಡಲಾಗಿದ್ದು ಭಾಗವಹಿಸಿದ ಎಲ್ಲರಿಗೂ ಎರಡು ದಿನಗಳ ಕಾಲ ಊಟ ಉಪಹಾರದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪರಿಷತಿನ ಬೆಂಗಳೂರು ಉತರ ಶೈಕ್ಷಣಿಕ ಜಿಲೆಯ ಗೌರವಾಧಕ್ಷ ಲಿಂಗರಾಜು. ಬಿ.ಎಂ, ಅಧಕ್ಷ ಡಾ. ಸುರೇಶ್ ವಿ, ಪಧಾನ ಕಾರ್ಯದರ್ಶಿ ಡಾ.ಆರ್.ಬಿ. ಬೀರೇಗೌಡ ಖಜಾಂಚಿ ಸುಹಾಸ್ ಸುಬ್ಬರಾಜು,ಕಾರ್ಯದರ್ಶಿ ಬಿಳಿ ಶಿವಾಲಯ ರವಿ ನಿರ್ದೇಶಕರಾದ ಸುಮಾ ರಮೇಶ್ ಮತ್ತಿತರರಿದ್ದರು.